ಬೆಂಗಳೂರು : ಬೆಂಗಳೂರಲ್ಲಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳು ದಾಳಿ ನಡೆಸಿದ್ದು, ಓರ್ವಳ ಸ್ಥಿತಿ ಗಂಭೀರವಾಗಿದೆ.
ಬೆಂಗಳೂರಿನ ಡಾ.ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರ ಮೇಲೆ ಬೀದಿನಾಯಿಗಳು ದಾಳಿ ನಡೆಸಿದೆ. ವಿದ್ಯಾರ್ಥಿನಿಯರು ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ವಿವಿಯಲ್ಲಿ 3 ನೇ ಸೆಮಿಸ್ಟರ್ ವ್ಯಾಸಂಗ ಮಾಡುತ್ತಿದ್ದರು.
ಬೀದಿನಾಯಿಯಿಂದ ಒಳಗಾದ ಸೌಜನ್ಯ, ನಿಶ್ಚಿತಾ ಎಂಬ ವಿದ್ಯಾರ್ಥಿನಿಯರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸದ್ಯ ಓರ್ವ ವಿದ್ಯಾರ್ಥಿನಿ ಸ್ಥಿತಿ ಗಂಭೀರವಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.