ಬೆಂಗಳೂರು: ಬೆಂಗಳೂರಿನಲ್ಲಿ ಇಬ್ಬರು ವಿದ್ಯಾರ್ಥಿನಿಯರ ನಾಪತ್ತೆ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಲಾಗಿದೆ. ನಾಪತ್ತೆ ಪ್ರಕರಣ ನಡೆದು ಮೂರು ತಿಂಗಳು ಕಳೆದರೂ ತನಿಷ್ಕಾ ಮತ್ತು ತೇಜಸ್ವಿನಿ ಎಂಬ ವಿದ್ಯಾರ್ಥಿನಿಯರು ಪತ್ತೆಯಾಗಿಲ್ಲ.
ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯಾರ್ಥಿನಿಯರು ನಾಪತ್ತೆಯಾದ ಬಗ್ಗೆ ದೂರು ದಾಖಲಾಗಿದ್ದು, ಪರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಈ ಹಿಂದೆ ಪೋಷಕರು ಹೈಕೋರ್ಟ್ ನಲ್ಲಿ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಸಿದ್ದರು. ಜನವರಿ 31 ರಂದು ಇಬ್ಬರು ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಆಧಾರ್ ಕಾರ್ಡ್ ನೊಂದಿಗೆ ಇಬ್ಬರೂ ಮನೆ ಬಿಟ್ಟು ಹೋಗಿದ್ದಾರೆ. ಆದರೆ ಇದುವರೆಗೂ ವಿದ್ಯಾರ್ಥಿನಿಯರ ಸುಳಿವು ಪೊಲೀಸರಿಗೆ ಸಿಕ್ಕಿಲ್ಲ. ಹೀಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಪೋಷಕರು ಕೇಳಿದ್ದರು. ಸದ್ಯ ಪ್ರಕರಣದ ತನಿಕೆಯನ್ನು ಸಿಐಡಿಗೆ ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಈ ಪ್ರಕರಣ ಕುರಿತಾದ ಕಡತಗಳನ್ನು ವಿದ್ಯಾರಣ್ಯಪುರ ಪೊಲೀಸರು ಸಿಐಡಿಗೆ ಹಸ್ತಾಂತರ ಮಾಡಿದ್ದಾರೆ.

