HomeLive NewsBREAKING: ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

BREAKING: ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಭೀಕರ ಅಪಘಾತ: ಇಬ್ಬರು ಸ್ನೇಹಿತರು ಸ್ಥಳದಲ್ಲೇ ದುರ್ಮರಣ

ಕೋಲಾರ: ದೇವಸ್ಥಾನಕ್ಕೆಂದು ಬೈಕ್ ನಲ್ಲಿ ತೆರಳುತ್ತಿದ್ದ ಇಬ್ಬರು ಸ್ನೇಹಿತರು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನಲ್ಲಿ ನಡೆದಿದೆ.

ಇಲ್ಲಿನ ಅರಿಕೆರೆ ಗೇಟ್ ಬಳಿ ಈ ದುರಂತ ಸಂಭವಿಸಿದೆ. ಮೃತರನ್ನು ಚಿಂತಾಮಣಿಯ ಶಶಿ (25) ಮತ್ತು ನೆಲಮಂಗಲದ ತನುಷ್ (25) ಎಂದು ಗುರುತಿಸಲಾಗಿದೆ. ಇಬ್ಬರೂ ಆಂಧ್ರದ ಕಾಣಿಪಾಕಂ ದೇವಾಲಯಕ್ಕೆ ಬುಲೆಟ್‌ನಲ್ಲಿ ತೆರಳುತ್ತಿದ್ದಾಗ ಕ್ಯಾಂಟರ್ ವಾಹನ ಡಿಕ್ಕಿಯಾಗಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರೂ ಮೃತಪಟ್ಟಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular