ಬೆಂಗಳೂರು: ಸ್ಥಳೀಯ ಪೊಲೀಸ್ ಠಾಣೆಗೆ ವಿದೇಶಿ ಪ್ರಜೆಗಳ ಬಗ್ಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಇಬ್ಬರು ಮನೆ ಮಾಲೀಕರನ್ನು ಮಾದನಾಯಕನಹಳ್ಳಿ, ಠಾಣೆ ಪೋಲೀಸರು ಬಂಧಿಸಿದ್ದಾರೆ.
ಬೆಂಗಳೂರು ಉತ್ತರ ತಾಲೂಕಿನ ಬೈಲಕೋನೇನಹಳ್ಳಿಯ ಸಿದ್ದೇಶ್ವರ ಲೇಔಟ್ ನಿವಾಸಿ ಸುನಿಲ್(45) ಮತ್ತು ಕುದುರೆಗೆರೆಯ ಜಯರಾಮ್(42) ಬಂಧಿತ ಮನೆ ಮಾಲೀಕರು. ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವುದು ಕಡ್ಡಾಯವೆಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇವರು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡಿದ್ದರೂ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡದ ಕಾರಣ ಕ್ರಮಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.

