HomeKarnatakaBREAKING NEWS: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

BREAKING NEWS: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳ ದಿಢೀರ್ ವರ್ಗಾವಣೆ

ಬೆಂಗಳೂರು: ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಐಪಿಎಸ್ ಅಧಿಕಾರಿ ಶರತ್ ಚಂದ್ರ ಅವರನ್ನು ಪೊಲೀಸ್ ನೇಮಕಾತಿ ವಿಭಾಗದ ನಿರ್ದೇಶಕರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಟ್ರಾಫಿಕ್, ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಜವಾಬ್ದಾರಿಯನ್ನೂ ನೀಡಲಾಗಿದೆ. ಈ ಹಿಂದೆ ಶರತ್ ಚಂದ್ರ ಗುಪ್ತಚರ ಇಲಾಖೆ ಎಡಿಜಿಪಿಯಾಗಿದ್ದರು.

ಐಪಿಎಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್ ಅವರನ್ನು ಗುಪ್ತಚರ ಇಲಾಖೆ ನೀತನ ಎಡಿಜಿಪಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಇದರ ಜೊತೆಗೆ ಹೇಮಂತ್ ನಿಂಬಾಳ್ಕರ್ ವಾರ್ತಾ ಇಲಾಖೆ ಆಯುಕ್ತರಾಗಿಯೂ ಮುಂದುವರೆಯಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular