ಹೋರಿ ಬೆದರಿಸುವ ಸ್ಪರ್ಧೆಯಲ್ಲಿ ಇಬ್ಬರು ಸಾವು: ನಾಲ್ವರು ಆಯೋಜಕರು ಅರೆಸ್ಟ್

ಹಾವೇರಿ: ಹೋರಿ ಬೆದರಿಸುವ ಸ್ಪರ್ಧೆ ಸಂದರ್ಭದಲ್ಲಿ ಇಬ್ಬರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆಯೋಜಕರನ್ನು ಬಂಧಿಸಲಾಗಿದೆ.

ಹಾವೇರಿ ಜಿಲ್ಲೆ ಹಿರೇಕೆರೂರು ತಾಲೂಕಿನ ಹಂಸಭಾವಿ ಗ್ರಾಮದ ಕೊಳ್ಳೇರ ಕಟ್ಟೆಕೆರೆಯಲ್ಲಿ ಮಾರ್ಚ್ 4ರಂದು ರಾಜ್ಯಮಟ್ಟದ ಹೋರಿ ಬೆದರಿಸುವ ಸ್ಪರ್ಧೆ ಆಯೋಜಿಸಿದ್ದು, ಈ ಸಂದರ್ಭದಲ್ಲಿ ನಡೆದ ಅವಘಡದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆಯೋಜಕರನ್ನು ಬಂಧಿಸಿದ್ದಾರೆ. ಯಾವುದೇ ಇಲಾಖೆಯಿಂದ ಅನುಮತಿ ಪಡೆಯದೆ ಸ್ಪರ್ಧೆ ಆಯೋಜಿಸಿದ್ದ ಹಿನ್ನೆಲೆಯಲ್ಲಿ ಸೋಮಶೇಖರ್, ಹನುಮಂತ, ಶಫಿವುಲ್ಲಾ, ಶ್ರೀಕಾಂತ್ ಅವರನ್ನು ಬಂಧಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read