BREAKING: ಮಣಿಪುರದಲ್ಲಿ ಮತ್ತೆ ಹಿಂಸಾಚಾರಕ್ಕೆ ಇಬ್ಬರು ಬಲಿ

ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ಶನಿವಾರ ಎರಡು ಸಶಸ್ತ್ರ ಗುಂಪುಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಕಾಂಗ್‌ಪೊಕ್ಪಿ ಜಿಲ್ಲೆಯ ಗಡಿಗೆ ಸಮೀಪವಿರುವ ಸ್ಥಳದಲ್ಲಿ ಶೂಟೌಟ್ ನಡೆದಿದೆ. ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ರಾಜ್ಯ ಮತ್ತು ಕೇಂದ್ರ ಪಡೆಗಳನ್ನು ಧಾವಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತೆಂಗ್ನೌಪಾಲ್ ಜಿಲ್ಲೆಯಲ್ಲಿ ಸಶಸ್ತ್ರ ಗ್ರಾಮ ಸ್ವಯಂಸೇವಕರು ಮತ್ತು ಅಪರಿಚಿತ ಬಂದೂಕುಧಾರಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಗಾಯಗೊಂಡ ಒಂದು ದಿನದ ನಂತರ ಈ ಘಟನೆ ನಡೆದಿದೆ.

ಕಳೆದ ವರ್ಷ ಮೇ 3 ರಂದು ಮಣಿಪುರದಲ್ಲಿ ನಡೆದ ಜನಾಂಗೀಯ ಘರ್ಷಣೆಯ ನಂತರ ಕನಿಷ್ಠ 219 ಜನರು ಸಾವನ್ನಪ್ಪಿದ್ದಾರೆ. ಪರಿಶಿಷ್ಟ ಪಂಗಡದ(ಎಸ್‌ಟಿ) ಸ್ಥಾನಮಾನಕ್ಕಾಗಿ ಮೀಟೈ ಸಮುದಾಯದ ಬೇಡಿಕೆಯನ್ನು ಪ್ರತಿಭಟಿಸಿದ ವೇಳೆ ಘರ್ಷಣೆ ನಡೆದಿತ್ತು. ಮಣಿಪುರದ ಜನಸಂಖ್ಯೆಯ ಶೇಕಡ 53 ರಷ್ಟು ಮೈಟೆಯಿಸ್ ಪಾಲನ್ನು ಹೊಂದಿದೆ. ಇಂಫಾಲ್ ಕಣಿವೆಯಲ್ಲಿ ಹೆಚ್ಚಾಗಿ ವಾಸಿಸುತ್ತಿದ್ದಾರೆ. ಬುಡಕಟ್ಟು ಜನಾಂಗದವರು, ನಾಗಾಗಳು ಮತ್ತು ಕುಕಿಗಳು ಶೇಕಡಾ 40 ಕ್ಕಿಂತ ಸ್ವಲ್ಪ ಹೆಚ್ಚು ಇದ್ದು ಬೆಟ್ಟದ ಜಿಲ್ಲೆಗಳಲ್ಲಿ ವಾಸಿಸುತ್ತಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read