HomeKarnatakaಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಉಡುಪಿ ಜಿಲ್ಲೆಯಲ್ಲಿ ಮಳೆಯ ಅಬ್ಬರಕ್ಕೆ ಇಬ್ಬರು ಬಲಿ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ

ಬೆಂಗಳೂರು : ಉಡುಪಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಗೆ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉಡುಪಿ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಬಿಟ್ಟು ಬಿಡದೇ ಮಳೆಯಾಗುತ್ತಿದೆ. ಮಳೆ ಸಂಬಂಧಿ ಅವಘಡಗಳಿಂದ ಜಿಲ್ಲೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.  ರಕ್ಷಣಾ ಕಾರ್ಯಾಚರಣೆ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಧಿವೇಶನ ಮುಗಿದ ಬಳಿಕ ನಾಳೆ ಸಂಜೆ ಉಡುಪಿ ಜಿಲ್ಲೆಗೆ ಭೇಟಿ ನೀಡುತ್ತೇನೆ. ನಾಳೆ ಸಂಜೆಯೇ ಜಿಲ್ಲೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಹಾರ ಕ್ರಮಗಳ ಬಗ್ಗೆ ಸೂಚನೆ ನೀಡುತ್ತೇನೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular