ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲೂಕಿನ ಚನ್ನಾಪುರ ಸಮೀಪ ಬಗ್ಗವಳ್ಳಿ ಗೇಟ್ ಬಳಿ ಶನಿವಾರ ಸಂಭವಿಸಿದ ಅಪಘಾತದಲ್ಲಿ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ.
ಮಂಜುನಾಥ್(34) ಮಳಿಯಪ್ಪ(35) ಮೃತಪಟ್ಟವರು. ಅಪಘಾತದಲ್ಲಿ ಗಾಯಗೊಂಡ 8 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೊಸದುರ್ಗ ತಾಲೂಕಿನ ಮಾಳಿಗೆಹಟ್ಟಿ ಗ್ರಾಮಸ್ಥರು ಕಾಟಲಿಂಗೇಶ್ವರ ಸ್ವಾಮಿ ಉತ್ಸವ ಮೂರ್ತಿಗೆ ಕಲ್ಲತ್ತಗಿರಿಯಲ್ಲಿ ವಿಶೇಷ ಪೂಜೆ ಸಲ್ಲಿಸಿ ಟ್ರ್ಯಾಕ್ಟರ್ ನಲ್ಲಿ ವಾಪಸ್ ಬರುವಾಗ ಬಗ್ಗವಳ್ಳಿ ಗೇಟ್ ಬಳಿ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದೆ. ಟ್ರ್ಯಾಕ್ಟರ್ ನಲ್ಲಿದ್ದ 8-10 ಮಂದಿ ಗಾಯಗೊಂಡಿದ್ದು, ಅಜ್ಜಂಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಬ್ಬರು ಮೃತಪಟ್ಟಿದ್ದಾರೆ. ಅಜ್ಜಂಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

