ಧಾರವಾಡ : ಕ್ರೂಸರ್ ವಾಹನ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ್ದು, 10 ಮಂದಿ ಗಾಯಗೊಂಡ ಘಟನೆ ಧಾರವಾಡ ತಾಲೂಕಿನ ತೇಗೂರು ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಸುರೇಶ್ ತುಪ್ಪದ್ (30) ಮಹಾಂತಮ್ಮ ತುಪ್ಪದ್ (55 ) ಎಂದು ಗುರುತಿಸಲಾಗಿದೆ.
ಘಟನೆಯಲ್ಲಿ 10 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತರು ಗದಗ್ ನಗರದ ನಿವಾಸಿಗಳು .
ಮಹಾರಾಷ್ಟ್ರದಿಂದ ಕೊಲ್ಹಾಪುರಕ್ಕೆ ಆಗಮಿಸುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಚಾಲಕನ ನಿರ್ಲಕ್ಷ್ಯದಿಂದ ದುರ್ಘಟನೆ ಸಂಭವಿಸಿದ್ದು, ಚಾಲಕ ನಿದ್ದೆ ಮಂಪರಿನಲ್ಲಿ ಕಾರು ಚಲಾಯಿಸುತ್ತಿದ್ದನು ಎನ್ನಲಾಗಿದೆ.