HomeIndiaBREAKING : ರಾಜಸ್ಥಾನದಲ್ಲಿ ಟ್ರಕ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದು ಘೋರ ದುರಂತ :...

BREAKING : ರಾಜಸ್ಥಾನದಲ್ಲಿ ಟ್ರಕ್ ಗೆ ಶಾಲಾ ಬಸ್ ಡಿಕ್ಕಿ ಹೊಡೆದು ಘೋರ ದುರಂತ : ಇಬ್ಬರು ಸಾವು, ಹಲವು ಮಕ್ಕಳಿಗೆ ಗಾಯ

ಜೈಪುರ: ರಾಜಸ್ಥಾನದಲ್ಲಿ ಶಾಲಾ ಬಸ್ ಕಲ್ಲಿದ್ದಲು ತುಂಬಿದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಘಟನೆ ನಡೆದಿದೆ.

ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು 12 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಪಾಲಿ ಜಿಲ್ಲೆಯಲ್ಲಿ ಗುರುವಾರ ಮುಂಜಾನೆ ನಡೆದಿದೆ.

52 ಶಾಲಾ ವಿದ್ಯಾರ್ಥಿಗಳನ್ನು ಹೊತ್ತ ಬಸ್ ಶಿಕಾರ್ಪುರ ಕಡೆಗೆ ತೆರಳುತ್ತಿದ್ದಾಗ ಸುಮೇರ್ಪುರ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರಂತ ಅಪಘಾತ ಸಂಭವಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular