BREAKING: ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ ಸಂಭವಿಸಿ ಘೋರ ದುರಂತ: ಕನಿಷ್ಠ ಇಬ್ಬರು ಸಾವು, 5 ಮಂದಿಗೆ ಗಾಯ

ಲಖ್ನೋ: ಉತ್ತರ ಪ್ರದೇಶದ ಲಖ್ನೋ ಗುಡಂಬಾ ಪ್ರದೇಶದ ಮನೆಯೊಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಐದು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಗುಡಂಬಾದ ಬೆಹ್ತಾ ಪ್ರದೇಶದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸಂಭವಿಸಿದ ಸ್ಫೋಟದಲ್ಲಿ ಪಕ್ಕದ ಮನೆಗಳಿಗೂ ಹಾನಿಯಾಗಿದೆ.

ಅಧಿಕಾರಿಗಳ ಪ್ರಕಾರ, ಸ್ಫೋಟದಿಂದಾಗಿ ಛಾವಣಿಯ ಒಂದು ಭಾಗ ಕುಸಿದಿದ್ದು, ಕನಿಷ್ಠ ಇಬ್ಬರು ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ ಮತ್ತು ಸಿಕ್ಕಿಬಿದ್ದವರನ್ನು ರಕ್ಷಿಸಲು ಪ್ರಸ್ತುತ ಕಾರ್ಯಾಚರಣೆ ನಡೆಯುತ್ತಿದೆ.

ಸಹಾಯಕ ಪೊಲೀಸ್ ಆಯುಕ್ತ(ಎಸಿಪಿ) ಅನಿಂದ್ಯ ವಿಕರಂ ಸಿಂಗ್ ಮಾತನಾಡಿ, “ಪಟಾಕಿ ಕಾರ್ಖಾನೆ ಕಾರ್ಯನಿರ್ವಹಿಸುತ್ತಿದ್ದ ಮನೆಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ.” ಎಂದು ತಿಳಿಸಿದ್ದಾರೆ.

ಸ್ಫೋಟದ ನಂತರ ಛಾವಣಿಯ ಒಂದು ಭಾಗ ಕುಸಿದಿದ್ದು, ಐದು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿದ್ದಾರೆ. ಐವರನ್ನು ಅವಶೇಷಗಳಿಂದ ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸ್ಥಳದಲ್ಲಿ ಅಗ್ನಿಶಾಮಕ ದಳ, ಆಂಬ್ಯುಲೆನ್ಸ್‌ಗಳು ಮತ್ತು ಸ್ಥಳೀಯ ಪೊಲೀಸರನ್ನು ಒಳಗೊಂಡ ರಕ್ಷಣಾ ತಂಡಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ ಎಂದು ಎಸಿಪಿ ಹೇಳಿದರು.

ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸ್ಫೋಟ ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಮ್ಯಾಜಿಸ್ಟ್ರೇಟ್ ವಿಶಾಕ್ ಜಿ, ಅವರು, ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಇನ್ನೂ ಗಂಭೀರವಾಗಿದೆ. ಉಳಿದ ಮೂವರು ಗಾಯಗೊಂಡವರು ಸ್ಥಿರವಾಗಿದ್ದಾರೆ” ಎಂದು ಹೇಳಿದರು.

ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ ಪಕ್ಕದ ಮನೆಗಳ ಮೇಲೂ ಪರಿಣಾಮ ಬೀರಿತು. “ಸ್ಫೋಟ ಸಂಭವಿಸಿದ ಮನೆ ಪಕ್ಕದಲ್ಲಿರುವ ಕನಿಷ್ಠ ನಾಲ್ಕು ಮನೆಗಳು ಸ್ಫೋಟದಲ್ಲಿ ಹಾನಿಗೊಳಗಾಗಿವೆ ಎಂದು ಡಿಎಂ ಹೇಳಿದರು.

ಗಾಯಾಳುಗಳಿಗೆ ಸಾಕಷ್ಟು ವೈದ್ಯಕೀಯ ಆರೈಕೆ ಸಿಗುವಂತೆ ನೋಡಿಕೊಳ್ಳುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅದು ಮುಗಿದ ನಂತರ, ನಮ್ಮ ತಂಡಗಳು ಘಟನೆಯ ಹಿಂದಿನ ಕಾರಣಗಳನ್ನು ಮತ್ತು ಅದರಲ್ಲಿ ಭಾಗಿಯಾಗಿರುವವರನ್ನು ಪರಿಶೀಲಿಸುತ್ತವೆ ಎಂದು ಅವರು ಹೇಳಿದರು.

ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ. ಪರಿಹಾರ ಮತ್ತು ರಕ್ಷಣಾ ಪ್ರಯತ್ನಗಳನ್ನು ತ್ವರಿತಗೊಳಿಸಲು ತಕ್ಷಣ ಸ್ಥಳಕ್ಕೆ ತಲುಪಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read