BREAKING : ಪಹಲ್ಗಾಮ್ ಉಗ್ರರ ದಾಳಿಗೆ ಇಬ್ಬರು ಸ್ಥಳೀಯರ ಸಹಾಯ : ‘NIA’ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲು.!

ಡಿಜಿಟಲ್ ಡೆಸ್ಕ್ : ಇಬ್ಬರು ಸ್ಥಳೀಯರ ಸಹಾಯದಿಂದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿ ನಡೆದಿದೆ ಎಂದು ಎನ್ ಐ ಐ ತನಿಖೆಯಲ್ಲಿ ಸ್ಪೋಟಕ ಮಾಹಿತಿ ಬಯಲಾಗಿದೆ.

ದಾಳಿಗೆ ಇಬ್ಬರು ಸ್ಥಳೀಯರ ಸಹಾಯವಿದೆ ಹಾಗೂ ಇಬ್ಬರು ಸ್ಥಳೀಯ ಭಯೋತ್ಪಾದಕರು ದಾಳಿಗೆ ಸಹಾಯ ಮಾಡಿದ್ದಾರೆ ಎಂಬುದು ತನಿಖೆಯಲ್ಲಿ ಬಯಲಾಗಿದೆ. ಸದ್ಯ, ಜಮ್ಮು-ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಸಂಬಂಧಿಸಿದಂತೆ ಮೂವರು ಉಗ್ರರ ರೇಖಾಚಿತ್ರ ಬಿಡುಗಡೆ ಮಾಡಲಾಗಿದೆ.

ಉಗ್ರರ ದಾಳಿಯ ತನಿಖೆ ನಡೆಸುತ್ತಿರುವ ಎನ್ ಐ ಎ ರೇಖಾಚಿತ್ರವನ್ನು ಬಿಡುಗಡೆ ಮಾಡಿದೆ. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಮೊದಲ ಚಿತ್ರ ಬಹಿರಂಗವಾಗಿತ್ತು. ಈ ಚಿತ್ರವು ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರಲ್ಲಿ ಒಬ್ಬನದ್ದಾಗಿದ್ದು, ಶಸ್ತ್ರಾಸ್ತ್ರಗಳನ್ನು ಹಿಡಿದುಕೊಂಡು ಪಠಾಣಿ ಸೂಟ್ ಧರಿಸಿರುವಂತೆ ಕಂಡುಬಂದಿದೆ. ಈ ಬೆನ್ನಲ್ಲೇ ಎನ್ ಐ ಎ ಇದೀಗ ರೇಖಾಚಿತ್ರವನ್ನು ಬಿಡುಗಡೆ ಮಾಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read