ಕಲಬುರಗಿ: ರಸ್ತೆ ಕಾಮಗಾರಿ ಬಿಲ್ ಮಂಜೂರಿಗೆ ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ಜೆಇ ಶ್ರೀಪಾದ ಕುಲಕರ್ಣಿ, ಪಿಡಿಒ ಮಂಜುಶ್ರೀ ಅಮಾನತುಗೊಂಡವರು. ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಇದರ ಬಿಲ್ ಮಾಡಲು ಜೆಇ ಮತ್ತು ಪಿಡಿಒ ಗುತ್ತಿಗೆದಾರರ ಬಳಿ ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು.
ಈ ಕುರಿತಾದ ವಿಡಿಯೋ ವೈರಲ್ ಆಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ಇಲಾಖೆ ವಿಚಾರಣೆ ಬಾಕಿ ಇರಿಸಿ ಇಬ್ಬರನ್ನು ತಕ್ಷಣವೇ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯತಿ ಸಿಇಒ ಭವರ್ ಸಿಂಗ್ ಮೀನಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.