HomeLatest Newsಕಾಮಗಾರಿ ಬಿಲ್ ಮಂಜೂರಿಗೆ ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಅಮಾನತು

ಕಾಮಗಾರಿ ಬಿಲ್ ಮಂಜೂರಿಗೆ ಕಮಿಷನ್ ಕೇಳಿದ ಇಬ್ಬರು ಅಧಿಕಾರಿಗಳು ಅಮಾನತು

ಕಲಬುರಗಿ: ರಸ್ತೆ ಕಾಮಗಾರಿ ಬಿಲ್ ಮಂಜೂರಿಗೆ ಗುತ್ತಿಗೆದಾರರ ಬಳಿ ಲಂಚಕ್ಕೆ ಬೇಡಿಕೆ ಇಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.

ಜೆಇ ಶ್ರೀಪಾದ ಕುಲಕರ್ಣಿ, ಪಿಡಿಒ ಮಂಜುಶ್ರೀ ಅಮಾನತುಗೊಂಡವರು. ಚಿತ್ತಾಪುರ ತಾಲೂಕಿನ ಗುಂಡಗುರ್ತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಿಸಿ ರಸ್ತೆ ಕಾಮಗಾರಿ ನಡೆಸಲಾಗಿದ್ದು, ಇದರ ಬಿಲ್ ಮಾಡಲು ಜೆಇ ಮತ್ತು ಪಿಡಿಒ ಗುತ್ತಿಗೆದಾರರ ಬಳಿ ಕಮಿಷನ್ ಗೆ ಬೇಡಿಕೆ ಇಟ್ಟಿದ್ದರು.

ಈ ಕುರಿತಾದ ವಿಡಿಯೋ ವೈರಲ್ ಆಗಿದ್ದು, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಸೂಚನೆ ಮೇರೆಗೆ ಇಲಾಖೆ ವಿಚಾರಣೆ ಬಾಕಿ ಇರಿಸಿ ಇಬ್ಬರನ್ನು ತಕ್ಷಣವೇ ಜಾರಿಗೆ ಬರುವಂತೆ ಜಿಲ್ಲಾ ಪಂಚಾಯತಿ ಸಿಇಒ ಭವರ್ ಸಿಂಗ್ ಮೀನಾ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular