ತುಮಕೂರು : KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮತ್ತಿಹಳ್ಳಿಯಲ್ಲಿ ನಡೆದಿದೆ.
ಮೃತರನ್ನು ರಜನಿಕಾಂತ್ (33) , ಉಮೇಶ್ (22) ಎಂದು ಗುರುತಿಸಲಾಗಿದೆ.
ರಸ್ತೆ ಕಾಮಗಾರಿ ನಡೆಯುತ್ತಿದ್ದ ಹಿನ್ನೆಲೆ ಕಿರಿದಾದ ರಸ್ತೆಯಿತ್ತು, ಈ ವೇಳೆ KSRTC ಬಸ್ ನೇರವಾಗಿ ಬಂದು ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲೇ ಇಬ್ಬರು ಸವಾರರು ಮೃತಪಟ್ಟಿದ್ದಾರೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
You Might Also Like
TAGGED:KSRTC ಬಸ್ ಡಿಕ್ಕಿ