HomeKarnatakaBIG NEWS: ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

BIG NEWS: ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ: ಇಬ್ಬರು ಪೊಲೀಸ್ ಸಿಬ್ಬಂದಿ ಸಸ್ಪೆಂಡ್

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಅಂಗನವಾಡಿ ಮಕ್ಕಳ ಆಹಾರ ಅಕ್ರಮ ಸಂಗ್ರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ ಕಸಬಾಪೇಟೆ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಸಸ್ಪೆಂಡ್ ಮಾಡಲಾಗಿದೆ.

ಪಿಸಿಗಳಾದ ಮಾಬುಸಾಬ್ವಾಲಿಕಾರ್, ಗೋಣೆಪ್ಪನವರ್ ಅಮಾನತುಗೊಂಡವರು. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತ ಶಶಿಕುಮಾರ್ ಇಬ್ಬರು ಪಿಸಿಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಕರ್ತವ್ಯ ಲೋಪ, ಗುಒತ ಮಾಹಿತಿ ಸಂಗ್ರಹಿಸುವಲ್ಲಿ ವಿಫಲ ಹಿನ್ನೆಲೆಯಲ್ಲಿ ಅಮಾನತು ಮಾಡಲಾಗಿದೆ. ಫೆ.15ರಂದು ಗಬ್ಬೂರು ಬಳಿ ಮಕ್ಕಳ ಆಹಾರ ಸಂಗ್ರಹಿಸಿದ್ದ ಗೋದಾಮಿನ ಮೇಲೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ಅಂಗನವಾಡಿ ಮಕ್ಕಳ ಆಹಾರ ಪತ್ತೆಯಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular