BREAKING : ಕೋಲ್ಕತ್ತಾದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರು ಸಿಲುಕಿರುವ ಶಂಕೆ..!

ಕೊಲ್ಕತ್ತಾದಲ್ಲಿ ನಿರ್ಮಾಣ ಹಂತದಲ್ಲಿದ್ದ ಐದು ಅಂತಸ್ತಿನ ಕಟ್ಟಡ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದು, ಹಲವರು ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ.

ಗಾರ್ಡನ್ ರೀಚ್ ಪ್ರದೇಶದ ಹಜಾರಿ ಮೊಲ್ಲಾ ಬಗಾನ್ ನ ಪಕ್ಕದ ಕೊಳೆಗೇರಿಯಲ್ಲಿ ಐದು ಅಂತಸ್ತಿನ ಕಟ್ಟಡದ ಒಂದು ಭಾಗವು ಮಧ್ಯರಾತ್ರಿಯ ಸುಮಾರಿಗೆ ಕುಸಿದಿದೆ. ಈವರೆಗೆ 14 ಜನರನ್ನು ರಕ್ಷಿಸಲಾಗಿದ್ದು, ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಹೆಚ್ಚಿನ ಬದುಕುಳಿದವರಿಗಾಗಿ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

“ಗಾರ್ಡನ್ ರೀಚ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡವೊಂದು ಭಾನುವಾರ ತಡರಾತ್ರಿ ಕುಸಿದಿದೆ. ನಾವು ಕೆಲವು ಜನರನ್ನು ರಕ್ಷಿಸಿದ್ದೇವೆ. ರಕ್ಷಣಾ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ” ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಸ್ಥಳದಲ್ಲಿ ಎನ್ಡಿಆರ್ಎಫ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ..

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read