HomeLatest Newsಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಬಕಾರಿ ಡಿಸಿ ಸೇರಿ ಇಬ್ಬರು ಅಮಾನತು

ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಅಬಕಾರಿ ಡಿಸಿ ಸೇರಿ ಇಬ್ಬರು ಅಮಾನತು

ಬೆಂಗಳೂರು: ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರಿಗೆ ಬಲೆಗೆ ಬಿದ್ದಿದ್ದ ಅಪಕಾರಿ ಉಪ ಆಯುಕ್ತ ಜಗದೀಶ್ ನಾಯ್ಕ್ ಮತ್ತು ಅಬಕಾರಿ ಅಧೀಕ್ಷಕ ಕೆ.ಎಂ. ತಮ್ಮಣ್ಣ ಅವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ.

ಲಕ್ಷ್ಮೀನಾರಾಯಣ ಎಂಬುವವರಿಂದ ಅಬಕಾರಿ ಲೈಸೆನ್ಸ್ ಗೆ ಸಂಬಂಧಿಸಿದಂತೆ ಬ್ಯಾಟರಾಯನಪುರದ ಅಬಕಾರಿ ಭವನದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಅವರನ್ನು ಬಂಧಿಸಿದ್ದರು. ಅವರು ಲಂಚ ಸ್ವೀಕರಿಸಿರುವುದು ಮೇಲ್ನೋಟಕ್ಕೆ ಕಂಡು ಬಂದ ಹಿನ್ನೆಲೆಯಲ್ಲಿ ವಿಚಾರಣೆಯನ್ನು ಕಾಯ್ದಿರಿಸಿ ಅಬಕಾರಿ ಇಲಾಖೆ ಸೇವೆಯಿಂದ ಅಮಾನತು ಮಾಡಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular