HomeKarnatakaBIG NEWS : ವಿಧಾನಸೌಧದ ಬಳಿ ‘ಡ್ರೋನ್’ ಹಾರಿಸಲು ಯತ್ನಿಸಿದ ಇಬ್ಬರು ಪೊಲೀಸ್ ವಶಕ್ಕೆ

BIG NEWS : ವಿಧಾನಸೌಧದ ಬಳಿ ‘ಡ್ರೋನ್’ ಹಾರಿಸಲು ಯತ್ನಿಸಿದ ಇಬ್ಬರು ಪೊಲೀಸ್ ವಶಕ್ಕೆ

ಬೆಂಗಳೂರು : ವಿಧಾನಸೌಧದ ಬಳಿ ಡ್ರೋನ್ ಹಾರಿಸಲು ಯತ್ನಿಸಿದ ಇಬ್ಬರನ್ನು ಪೊಲೀಸ್ ವಶಕ್ಕೆ ಪಡೆದುಕೊಂಡಿದ್ದಾರೆ.

ವಿಧಾನಸೌಧದ ಬಳಿ ಡ್ರೋನ್ ಹಾರಾಟಕ್ಕೆ ನಿರ್ಬಂಧವಿದ್ದರೂ ಖಾಸಗಿ ಕಂಪನಿಯ ಇಬ್ಬರು ನೌಕರು ಡ್ರೋನ್ ಹಾರಿಸಲು ಯತ್ನಿಸಿದ್ದಾರೆ. ಈ ಹಿನ್ನೆಲೆ ಇಬ್ಬರು ವ್ಯಕ್ತಿಗಳ ವಿರುದ್ಧ ವಿಧಾನಸೌಧ ಠಾಣೆ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. ನಂತರ ಬೇಲ್ ನೀಡಿ ಇಬ್ಬರನ್ನು ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಖಾಸಗಿ ಕಂಪನಿಯ 15 ವರ್ಷಗಳ ಸಂಭ್ರಮಾಚರಣೆ ಹಿನ್ನೆಲೆ ವಿಧಾನಸೌಧದ ಬಳಿ ವಿಡಿಯೋ ಚಿತ್ರೀಕರಣ ಮಾಡಲು ಇಬ್ಬರು ಯುವಕರು ಬಂದಿದ್ದರು. ಕೂಡಲೇ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular