ಮಂಡ್ಯ: ಮುಖ್ಯಮಂತ್ರಿ ಸೇರಿದಂತೆ ಉನ್ನತ ಅಧಿಕಾರಿಗಳ ಸಹಿ ಫೋರ್ಜರಿ ಮಾಡಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಯುವಕರನ್ನು ವಂಚಿಸುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲಿಸ್ ಕಾನ್ ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.
ಗ್ರಾಮಾಂತರ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಚಿಕ್ಕಯ್ಯ, ಸೆಂಟ್ರಲ್ ಠಾಣೆಯ ಕಾನ್ಸ್ಟೇಬಲ್ ಲೋಕೇಶ್ ಅಮಾನತುಗೊಂಡವರು. ಕೆಲಸ ಕೊಡಿಸುವುದಾಗಿ ನಿರುದ್ಯೋಗಿ ಯುವಕರನ್ನು ನಂಬಿಸಿ ಲಕ್ಷಾಂತರ ರೂಪಾಯಿ ಪಡೆದು ವಂಚಿಸಿ ಜೈಲು ಸೇರಿರುವ ಆರೋಪಿ ವೆಂಕಟೇಶನಿಗೆ ಇವರಿಬ್ಬರೂ ಸಹಕರಿಸಿದ್ದರು ಎನ್ನುವುದು ಪೊಲೀಸ್ ಪ್ರಾಥಮಿಕ ತನಿಖೆಯಲ್ಲಿ ದೃಢಪಟ್ಟಿದೆ.
ಕರ್ತವ್ಯ ಲೋಪದ ಆರೋಪದ ಮೇಲೆ ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಅವರು ಇಬ್ಬರು ಕಾನ್ಸ್ಟೇಬಲ್ ಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.