HomeKarnatakaBIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

BIG NEWS: ಜೂಜಾಟದ ವೇಳೆ ಗಲಾಟೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಕೊಪ್ಪಳ: ಕೊಪ್ಪಳ ಜಿಲ್ಲೆಯ ಕಾರಟಗಿ ತಾಲೂಕಿನ ಬೂದಗುಂಪ ಗ್ರಾಮದಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ.

ಜೂಜಾಟದ ವೇಳೆ ಕೆಲ ಗುಂಪಿನ ನಡುವೆ ಗಲಾಟೆಯಾಗಿತ್ತು. ಗಲಾಟೆಯನ್ನು ತಡೆಯಲು ವಿಫಲ ಹಾಗೂ ಕರ್ತವ್ಯಲೋಪದಡಿ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಡ್ ಕಾನ್ಸ್ ಟೇಬಲ್ ಸುರೇಶ್ ಹಾಗೂ ಕಾನ್ಸ್ ಟೇಬಲ್ ಶ್ರೀಕಾಂತ್ ಅಮಾನತುಗೊಂಡವರು. ಕಾರಟಗಿ ಠಾಣೆ ಇನ್ಸ್ ಪೆಕ್ಟರ್ ಸಿದ್ರಾಮಯ್ಯ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಬಳ್ಳಾರಿ ಐಜಿಪಿಗೆ ಕೊಪ್ಪಳ ಎಸ್ ಪಿ ಯಶೋಧಾ ವಂಟಗೋಡಿ ವರದಿ ನೀಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular