ಬೆಂಗಳೂರು: ಒಂದು ರಾಜ್ಯ ಒಂದು ಗ್ರಾಮೀಣ ಬ್ಯಾಂಕ್ ಎಂಬ ಕೇಂದ್ರದ ನೀತಿ ಅನ್ವಯ ರಾಜ್ಯದಲ್ಲಿ ಇಂದಿನಿಂದ ಒಂದೇ ಗ್ರಾಮೀಣ ಬ್ಯಾಂಕ್ ಕಾರ್ಯನಿರ್ವಹಿಸಲಿದೆ.
ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ವಿಲೀನವಾಗಿದ್ದು, ಒಂದೇ ಬ್ಯಾಂಕ್ ಆಗಿ ಕಾರ್ಯನಿರ್ವಹಿಸಲಿದೆ. ದೇಶದಲ್ಲಿರುವ 43 ಗ್ರಾಮೀಣ ಬ್ಯಾಂಕುಗಳ ಸಂಖ್ಯೆಯನ್ನು 28ಕ್ಕೆ ಇಳಿಕೆ ಮಾಡಲಾಗಿದೆ. ಇಂದಿನಿಂದ ಏಕೀಕೃತ ಕರ್ನಾಟಕ ಗ್ರಾಮೀಣ ಬ್ಯಾಂಕ್ ಆಗಿ ಕಾರ್ಯನಿರ್ವಹಿಸಲಿದೆ.
ಧಾರವಾಡದಲ್ಲಿ ಪ್ರಧಾನ ಕಚೇರಿ ಹೊಂದಿದ್ದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಮತ್ತು ಬಳ್ಳಾರಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಕರ್ನಾಟಕ ಗ್ರಾಮೀಣ ಬ್ಯಾಂಕುಗಳು ಪರಸ್ಪರ ವಿಲೀನವಾಗಿದ್ದು, ಮೇ 1ರ ಗುರುವಾರದಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಉದಯಿಸಲಿದೆ
ಏಕೀಕೃತ ಬ್ಯಾಂಕಿಗೆ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಅಧ್ಯಕ್ಷರೇ ಮುಖ್ಯಸ್ಥರಾಗಿರುತ್ತಾರೆ. ಈ ಹಿಂದಿನಂತೆಯೇ ಬಳ್ಳಾರಿಯಲ್ಲಿ ಹೊಸ ಬ್ಯಾಂಕ್ ಕಚೇರಿ ಇರಲಿದೆ. ಇದು ದೇಶದ ಎರಡನೇ ಬೃಹತ್ ಗ್ರಾಮೀಣ ಬ್ಯಾಂಕ್ ಆಗಿದೆ ಎನ್ನಲಾಗಿದೆ.