HomeLatest Newsಸರ್ಕಾರಿ ಕೆಲಸಕ್ಕೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ: ಇಬ್ಬರಿಗೆ ಜೈಲು ಶಿಕ್ಷೆ

ಸರ್ಕಾರಿ ಕೆಲಸಕ್ಕೆ ನಕಲಿ ಅಂಕಪಟ್ಟಿ ಸಲ್ಲಿಕೆ ಪ್ರಕರಣ: ಇಬ್ಬರಿಗೆ ಜೈಲು ಶಿಕ್ಷೆ

ವಿಜಯಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಅಟೆಂಡರ್ ಹುದ್ದೆಗೆ ನಕಲಿ ಅಂಕಪಟ್ಟಿ ಸಲ್ಲಿಸಿದ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಎರಡೂವರೆ ವರ್ಷ ಜೈಲು ಶಿಕ್ಷೆ, ತಲಾ ನಾಲ್ಕು ಸಾವಿರ ರೂಪಾಯಿ ದಂಡ ವಿಧಿಸಿ ವಿಜಯಪುರದ ಪ್ರಧಾನ ಸಿಜೆಎಂ ನ್ಯಾಯಾಲಯ ಆದೇಶಿಸಿದೆ.

ಶ್ರೀಶೈಲ ಚವಾಣ್ ಮತ್ತು ಗಂಗಪ್ಪ ನಾಯಕ ಎಂಬುವರು ಶಿಕ್ಷೆಗೆ ಒಳಗಾದವರು. 2013ರಲ್ಲಿ ಇಬ್ಬರೂ ತಮ್ಮ 7ನೇ ತರಗತಿಯ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಅದನ್ನೇ ನಿಜವೆಂದು ಕೆಎಸ್ಆರ್ಟಿಸಿ ಅಟೆಂಡರ್ ಹುದ್ದೆಗೆ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದರು.

ದಾಖಲಾತಿ ಪರಿಶೀಲಿಸಿದಾಗ ಮಹದೇವ ಕಾಂಬಳೆ ಎಂಬುವರು ಅಂಕಪಟ್ಟಿಗಳು ಸರಿಯಾಗಿವೆ ಎಂದು ದೃಢೀಕರಿಸಿ ಪ್ರಮಾಣ ಪತ್ರ ನೀಡಿದ್ದರು. ಇಬ್ಬರೂ ಆರೋಪಿಗಳು ಮೂಲ ಅಂಕಪಟ್ಟಿಗಳು ಕಳೆದು ಹೋಗಿವೆ ಎಂದು ಸಾಕ್ಷ್ಯ ನಾಶಪಡಿಸಿದ್ದರು. ಈ ಬಗ್ಗೆ ಸಂಸ್ಥೆಯ ವಿಭಾಗೀಯ ಕಚೇರಿಯ ಭದ್ರತಾ ಮತ್ತು ಜಾಗೃತ ಅಧಿಕಾರಿ ದುರ್ಗಪ್ಪ ಗುರಿಗಾರ 2013ರ ಡಿಸೆಂಬರ್ 26ರಂದು ಗೋಲಗುಮ್ಮಟ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪೊಲೀಸರು ತನಿಖೆ ನಡೆಸಿ ಕೋರ್ಟ್ ಗೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಸಿಜೆಎಂ ನ್ಯಾಯಾಲಯದ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಅಂಬಲಿ ಇಬ್ಬರಿಗೂ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಅಭಿಯೋಜಕ ಎಲ್.ಎಂ. ಹಳ್ಳೂರ ವಾದ ಮಂಡಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular