BREAKING: 2 ಅಂತಸ್ತಿನ ಕಟ್ಟಡ ಕುಸಿದು ಘೋರ ದುರಂತ: ಇಬ್ಬರು ಸಾವು, ಒಬ್ಬ ಗಂಭೀರ

ನವದೆಹಲಿ: ಗುರುವಾರ ಮುಂಜಾನೆ ದೆಹಲಿಯ ಕಬೀರ್ ನಗರದಲ್ಲಿ ಎರಡು ಅಂತಸ್ತಿನ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ. ಒಬ್ಬರು ಗಾಯಗೊಂಡಿದ್ದಾರೆ.

ದೆಹಲಿಯ ಕಬೀರ್‌ನಗರ ಪ್ರದೇಶದಲ್ಲಿ ಹಳೆ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯ ಬಗ್ಗೆ ಇಂದು ಮುಂಜಾನೆ 2.16 ರ ಸುಮಾರಿಗೆ ಪೊಲೀಸರಿಗೆ ಕರೆ ಬಂದಿದ್ದು, ನಂತರ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಕರೆ ಬಂದ ತಕ್ಷಣ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿವೆ. ಅವಶೇಷಗಳಡಿಯಲ್ಲಿ ಮೂವರು ಕಾರ್ಮಿಕರು ಸಮಾಧಿಯಾಗಿದ್ದಾರೆ ಎಂದು ಠಾಣಾಧಿಕಾರಿ ಅನೂಪ್ ಅವರು ಹೇಳಿದರು.

ಜಿಟಿಬಿ ಆಸ್ಪತ್ರೆಯಲ್ಲಿ ಅರ್ಷದ್(30) ಮತ್ತು ತೌಹಿದ್(20) ಎಂಬ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಘೋಷಿಸಲಾಗಿದ್ದು, ಇನ್ನೊಬ್ಬ ಕೆಲಸಗಾರ ರೆಹಾನ್(22) ಗಂಭೀರವಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಈಶಾನ್ಯ ಡಿಸಿಪಿ ಜಾಯ್ ಟಿರ್ಕಿ ತಿಳಿಸಿದ್ದಾರೆ. ಈ ಕುರಿತು ತನಿಖೆ ಪ್ರಗತಿಯಲ್ಲಿದ್ದು, ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಟಿರ್ಕಿ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read