HomeLatest Newsವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು

ವಂದೇ ಭಾರತ್ ರೈಲಿಗೆ ಸಿಲುಕಿ ಇಬ್ಬರು ವಿದ್ಯಾರ್ಥಿಗಳು ಸಾವು

ಬೆಂಗಳೂರು: ವಂದೇ ಭಾರತ್ ರೈಲಿಗೆ ಸಿಲುಕಿ ಖಾಸಗಿ ನರ್ಸಿಂಗ್ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಚಿಕ್ಕಬಾಣಾವರ ರೈಲ್ವೆ ನಿಲ್ದಾಣದಲ್ಲಿ ಭಾನುವಾರ ನಡೆದಿದೆ.

ಕೇರಳದ ಮೂಲದ ಸ್ಟೇರ್ಲಿನ್ ಎಲ್ಜಾ ಶಾಜಿ(19), ಜಸ್ಟಿನ್ ಜೋಸೆಫ್(20) ಮೃತಪಟ್ಟವರು. ರೈಲ್ವೆ ನಿಲ್ದಾಣಕ್ಕೆ ಮಧ್ಯಾಹ್ನ 2:30ಕ್ಕೆ ಬಂದಿದ್ದ ಅವರು ಅದೇ ವೇಳೆ ಬೆಂಗಳೂರಿನಿಂದ ಬೆಳಗಾವಿಗೆ ತೆರಳುತ್ತಿದ್ದ ವಂದೇ ಭಾರತ್ ರೈಲಿಗೆ ಸಿಲುಕಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಹೆಸರುಘಟ್ಟ ರಸ್ತೆಯ ಸಪ್ತಗಿರಿ ನರ್ಸಿಂಗ್ ಕಾಲೇಜಿನಲ್ಲಿ ಮೊದಲ ವರ್ಷದ ಬಿಎಸ್ಸಿ ವಿಭಾಗದಲ್ಲಿ ಇಬ್ಬರು ಓದುತ್ತಿದ್ದು, ಕಾಲೇಜು ಸಮೀಪದಲ್ಲೇ ವಾಸವಾಗಿದ್ದಾರೆ. ರೈಲಿಗೆ ಆಕಸ್ಮಿಕವಾಗಿ ಸಿಲುಕಿ ಸಾವನ್ನಪ್ಪಿದ್ದಾರೆಯೇ ಅಥವಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆಯೇ ಎನ್ನುವುದರ ಬಗ್ಗೆ ತನಿಖೆ ನಡೆದಿದೆ. ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular