ಮಂಗಳೂರು: ಕ್ಷುಲ್ಲಕ ವಿಚಾರಕ್ಕೆ ಜಗಳವಾಗಿ ಇಬ್ಬರು ವಿದ್ಯಾರ್ಥಿಗಳಿಗೆ ಚೂರಿ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳ ತಾಲೂಕಿನ ವಿಟ್ಲ ಪಟ್ಟಣದ ಐಟಿಐನಲ್ಲಿ ನಡೆದಿದೆ.
ಪುತ್ತೂರು ಬನ್ನೂರು ನಿವಾಸಿ ಮಹಮ್ಮದ್ ರಯಾನ್(18) ಮತ್ತು ಮಂಜೇಶ್ವರ ದೈಗೋಳಿ ನಿವಾಸಿ ಯಜ್ಞೇಶ್ ಗಾಯಗೊಂಡಿದ್ದು, ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಪ್ರಥಮ ವರ್ಷದ ಎಲೆಕ್ಟ್ರಿಷಿಯನ್ ಕೋರ್ಸ್ ಕಲಿಯುತ್ತಿರುವ ರಯಾನ್ ಮತ್ತು ವಿಟ್ಲ ನಿವಾಸಿ ಹೇಮಂತ್ ನಡುವೆ ಕ್ಷುಲ್ಲಕ ಮಾತಿನ ಚಕಮಕಿ ನಡೆದು ಜಗಳವಾಗಿದೆ.
ನಂತರ ಹೇಮಂತ್ ಚೂರಿ ತಂದು ರಯಾನ್ ಗೆ ಇರಿದಿದ್ದಾನೆ. ಆತನನ್ನು ತಡೆಯಲು ಬಂದ ಯಜ್ಞೇಶ್ ಗೂ ಇರಿತದ ಗಾಯಗಳಾಗಿವೆ. ಮಾಹಿತಿ ತಿಳಿದ ವಿಟ್ಲ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಹೇಮಂತ್ ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

