ಕೇಂದ್ರೀಯ ಸಂಸ್ಥೆಗಳು ಮತ್ತು ಜಾರ್ಖಂಡ್ ಭಯೋತ್ಪಾದನಾ ನಿಗ್ರಹ ದಳ (ATS) ದ ಸಮನ್ವಯದೊಂದಿಗೆ ದೆಹಲಿ ಪೊಲೀಸ್ ವಿಶೇಷ ಘಟಕವು ದೇಶಾದ್ಯಂತ ವಿವಿಧ ಸ್ಥಳಗಳಿಂದ ಇಬ್ಬರು ಶಂಕಿತ ಐಸಿಸ್ ಭಯೋತ್ಪಾದಕರನ್ನು ಬಂಧಿಸಿದೆ.
ಆರೋಪಿಗಳಲ್ಲಿ ಒಬ್ಬನಾದ ಅಫ್ತಾಬ್ನನ್ನು ದೆಹಲಿಯಲ್ಲಿ ಬಂಧಿಸಲಾಗಿದೆ. ಆತ ಮುಂಬೈ ನಿವಾಸಿಯಾಗಿದ್ದು, ಹಲವು ರಾಜ್ಯಗಳಲ್ಲಿ 12 ಕ್ಕೂ ಹೆಚ್ಚು ಸ್ಥಳಗಳಲ್ಲಿ ನಡೆಯುತ್ತಿರುವ ದಾಳಿಗಳ ಭಾಗವಾಗಿ ಆತನ ಬಂಧನವಾಗಿದೆ. ದೇಶಾದ್ಯಂತ ಕಾರ್ಯಾಚರಣೆ ಮುಂದುವರೆದಿದ್ದು, ಎಂಟಕ್ಕೂ ಹೆಚ್ಚು ಶಂಕಿತರನ್ನು ವಶಕ್ಕೆ ಪಡೆಯಲಾಗಿದೆ.ಶಂಕಿತರು ಭಾರತದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ರೂಪಿಸಿದ್ದರು ಎನ್ನಲಾಗಿದೆ.
ಸಂಬಂಧಿತ ಬೆಳವಣಿಗೆಯಲ್ಲಿ, ರಾಂಚಿಯ ಇಸ್ಲಾಂನಗರದ ತಬ್ರಾಕ್ ಲಾಡ್ಜ್ನಿಂದ ಶಂಕಿತ ಐಸಿಸ್ ಭಯೋತ್ಪಾದಕ ಆಶರ್ ಡ್ಯಾನಿಶ್ನನ್ನು ಬಂಧಿಸಲಾಗಿದೆ. ಡ್ಯಾನಿಶ್ ದೀರ್ಘಕಾಲದವರೆಗೆ ಲಾಡ್ಜ್ನಲ್ಲಿ ವಾಸಿಸುತ್ತಿದ್ದ ಮತ್ತು ಜಾರ್ಖಂಡ್ನ ಬೊಕಾರೊ ಜಿಲ್ಲೆಯ ಪೆಟರ್ವಾರ್ ನಿವಾಸಿ. ಕಾರ್ಯಾಚರಣೆಯ ಸಮಯದಲ್ಲಿ ಹಲವಾರು ಎಲೆಕ್ಟ್ರಾನಿಕ್ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ. ಡ್ಯಾನಿಶ್ ನನ್ನು ವಿಚಾರಣೆ ನಡೆಸಲಾಗುತ್ತಿದ್ದು, ದೆಹಲಿ ಪೊಲೀಸ್ ವಿಶೇಷ ಘಟಕವು ಹೆಚ್ಚಿನ ತನಿಖೆಗಾಗಿ ಆತನನ್ನು ದೆಹಲಿಗೆ ವಶಕ್ಕೆ ಪಡೆಯಲಿದೆ