HomeKarnatakaಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಸರಗಳ್ಳತನಕ್ಕಿಳಿದ ಖದೀಮರು: ಇಬ್ಬರು ಆರೋಪಿಗಳು ಅರೆಸ್ಟ್

ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಸರಗಳ್ಳತನಕ್ಕಿಳಿದ ಖದೀಮರು: ಇಬ್ಬರು ಆರೋಪಿಗಳು ಅರೆಸ್ಟ್

ಮಂಗಳೂರು: ಕಳ್ಳತನ ಪ್ರಕರಣದಲ್ಲಿ ಜೈಲು ಸೇರಿದ್ದ ಇಬ್ಬರು ಖದೀಮರು, ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆ ಮತ್ತೆ ಸರಗಳ್ಳತನ ಮಾಡಿ ಬಂಧಿತರಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.

ತೊಕ್ಕಟ್ಟುವಿನ ಹಬೀಬ್ ಹಸನ್ ಯಾನೆ ಅಬ್ಬಿ (43) ಬಂಟ್ವಾಳ ಮೂಲದ ಮೂಡದ ಉಮ್ಮರ್ ಶಿಯಾಫ್ (29) ಬಂಧಿತ ಆರೋಪಿ.

ಇಬ್ಬರೂ ಆರೋಪಿಗಳು ಕಳ್ಳತನ ಪ್ರಕರಣದಲ್ಲಿ ಬಂಧಿತರಾಗಿ ಜೈಲು ಸೇರಿದ್ದರು. ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ಇಬ್ಬರೂ ಬಿಡುಗಡೆಯಾದ ದಿನವೇ ಮತ್ತೆ ಕಳ್ಳತನಕ್ಕಿಳಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲೆಯ ಕಾರ್ಕಳ ಗ್ರಾಮಾಂತರ ಠಾಣೆವ್ಯಾಪ್ತಿಯಲ್ಲಿ ಬೈಕ್ ನಲ್ಲಿ ಆಗಮಿಸಿ ಮಹಿಳೆಯೊಬ್ಬರ ಚಿನ್ನದ ಸರ ಕಳುವು ಮಡಿ ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ಬಂಧಿಸಿ ಕಳುವು ಮಾಡಿದ್ದ ಚಿನ್ನದ ಸರ ಹಾಗೂ ಬೈಕ್ ವಶಕ್ಕೆ ಪಡೆದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular