ಚಾಮರಾಜನಗರ : ತಾಲೂಕಿನ ಕಾವೇರಿ ವನ್ಯಧಾಮದ ಶಾಗ್ಯ ಗಸ್ತಿನ ಹೊಳೆ ವ್ಯಾಪ್ತಿಯ ಮುರದಟ್ಟಿಯ ಕಿರುಬನಕಲ್ಲು ಗುಡ್ಡದಲ್ಲಿ ಎರಡು ಹುಲಿ ಮರಿಗಳು ಸಾವನ್ನಪ್ಪಿದೆ.
ಮರಿಗಳು ಜನಿಸಿ 15 ದಿನಗಳಾಗಿದ್ದು, ತಾಯಿ ಹುಲಿಯಿಂದ ಬೇರ್ಪಟ್ಟ ಬಳಿಕ ಹಸಿವಿನಿಂದ ಬಳಲಿ ನಿತ್ರಾಣಗೊಂಡ ಮೃತಪಟ್ಟಿರುವುದು ಮರಣೋತ್ತರ ಪರೀಕ್ಷೆಯಲ್ಲಿ ತಿಳಿದು ಬಂದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಗಸ್ತು ತಿರುಗುತ್ತಿದ್ದಾಗ ಹುಲಿ ಮರಿಗಳ ಶವ ಪತ್ತೆಯಾಗಿದೆ.
ಮಲೆ ಮಹದೇಶ್ವರ ವನ್ಯಧಾಮದ ಹೂಗ್ಯಂ ವನ್ಯಜೀವಿ ವಲಯದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ತಾಯಿ ಹುಲಿ ಸೇರಿದಂತೆ ಐದು ಹುಲಿಗಳು ಮೃತಪಟ್ಟಿದ್ದವು. ಈ ಬೆನ್ನಲ್ಲೇ ಈ ಘಟನೆ ನಡೆದಿದ್ದು, ಪ್ರಾಣಿ ಪ್ರಿಯರಲ್ಲಿ ಬೇಸರ ಮೂಡಿಸಿದೆ.