HomeIndiaSHOCKING : ಕೇರಳದಲ್ಲಿ ಹಿಟ್ & ರನ್'ಗೆ ಇಬ್ಬರು ಪಾದಚಾರಿಗಳು ಬಲಿ : ಭಯಾನಕ ವಿಡಿಯೋ...

SHOCKING : ಕೇರಳದಲ್ಲಿ ಹಿಟ್ & ರನ್’ಗೆ ಇಬ್ಬರು ಪಾದಚಾರಿಗಳು ಬಲಿ : ಭಯಾನಕ ವಿಡಿಯೋ ವೈರಲ್.!

ಕೇರಳದಲ್ಲಿ ಹಿಟ್ & ರನ್ ಗೆ ಇಬ್ಬರು ಪಾದಚಾರಿಗಳು ಬಲಿಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆದಂತಹ ಭಯಾನಕ ವಿಡಿಯೋ ಎಲ್ಲರನ್ನು ಬೆಚ್ಚಿ ಬೀಳಿಸಿದೆ.

ಕುಡಿದ ಮತ್ತಿನಲ್ಲಿ ವೇಗವಾಗಿ ಚಲಿಸುತ್ತಿದ್ದ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ ಘಟನೆ ಪಾಲಕ್ಕಾಡ್ ಜಿಲ್ಲೆಯ ಕೊಡುವಯೂರ್ ನಲ್ಲಿ ನಡೆದಿದೆ.

ಪಾದಚಾರಿಗಳು ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಚಾಲಕನನ್ನು ಎಳವಂಚೇರಿಯ ಪ್ರೇಮ್ ನಾಥ್ ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಮೃತರ ಗುರುತು ಇನ್ನೂ ತಿಳಿದುಬಂದಿಲ್ಲ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ವೈರಲ್ ಆಗಿದೆ.
ಮೃತ ಪುರುಷ ಮತ್ತು ಮಹಿಳೆ ರಸ್ತೆ ಬದಿಯಲ್ಲಿ ನಿಂತಿದ್ದಾಗ ಕಾರು ಅವರಿಗೆ ಡಿಕ್ಕಿ ಹೊಡೆದಿದೆ. ಗಂಭೀರವಾಗಿ ಗಾಯಗೊಂಡ ಅವರನ್ನು ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೇ ಇಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular