ದಕ್ಷಿಣ ಕನ್ನಡ ಜಿಲ್ಲೆ ಕುಕ್ಕೆ ಸುಬ್ರಹ್ಮಣ್ಯ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ಯುವಕರು ಮುಳುಗಿ ಮೃತಪಟ್ಟ ಘಟನೆ ಭಾನುವಾರ ನಡೆದಿದೆ.
ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನ ಹರಿಪ್ರಸಾದ್(37), ಸುಜಿತ್(26) ಮೃತಪಟ್ಟ ಯುವಕರು ಎಂದು ಹೇಳಲಾಗಿದೆ. ಇಬ್ಬರು ಅವಿವಾಹಿತರಾಗಿದ್ದು, ಭಾನುವಾರ ಸ್ನಾನಕ್ಕೆ ಕುಮಾರಧಾರಾ ನದಿಯ ಬಳಿ ಬಂದಿದ್ದಾರೆ. ಕುಲ್ಕುಂದ ಸಮೀಪ ನದಿಯಲ್ಲಿ ಸ್ನಾನಕ್ಕಿಳಿದ ಇಬ್ಬರು ನೀರಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಸುಬ್ರಹ್ಮಣ್ಯ ಠಾಣೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ಥಳೀಯರ ನೆರವಿನಿಂದ ಇಬ್ಬರ ಮೃತ ದೇಹಗಳನ್ನು ಹೊರ ತೆಗೆಯಲಾಗಿದೆ.

