HomeKarnatakaತೀರ್ಥಹಳ್ಳಿ : ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ತೀರ್ಥಹಳ್ಳಿ : ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆ

ಶಿವಮೊಗ್ಗ : ತೀರ್ಥಹಳ್ಳಿಯ ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರು ನಾಪತ್ತೆಯಾದ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ನಡೆದಿದೆ.

ಗೌತಮ್ (27) ಸಂಜಯ್ (25) ನದಿಯಲ್ಲಿ ನಾಪತ್ತೆಯಾಗಿದ್ದಾರೆ. ಇವರಿಗಾಗಿ ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ. ಈ ಇಬ್ಬರು ಯುವಕರು ಬೆಂಗಳೂರಿನಿಂದ ತೀರ್ಥಹಳ್ಳಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ.

ಭೀಮನಕಟ್ಟೆ ನದಿಯಲ್ಲಿ ಈಜಲು ಹೋಗಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಇನ್ನೂ ಕೂಡ ಶವ ಪತ್ತೆಯಾಗಿಲ್ಲ. ಅಗ್ನಿಶಾಮಕ ದಳದಿಂದ ತೀವ್ರ ಶೋಧ ಕಾರ್ಯಾಚರಣೆ ನಡೆದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular