ಬೆಂಗಳೂರು: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ ನೀಡಿದ್ದಾರೆ. ವಿಧಾನಸೌಧದಲ್ಲಿ ಡೆಪ್ಯೂಟಿ ಸ್ಪೀಕರ್ ಅವರನ್ನು ಭೇಟಿಯಾದ ಯು.ಟಿ.ಖಾದರ್ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.
ನೂತನ ಸಿಎಂ ಡಿ.ಕೆ.ಶಿವಕುಮಾರ್ ಸಂಪುಟದಲ್ಲಿ ಯು.ಟಿ.ಖಾದರ್ ಅವರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಸಚಿವ ಸ್ಥಾನ ಖಚಿತವಾಗುತ್ತಿದ್ದಂತೆಯೇ ಯು.ಟಿ.ಖಾದರ್ ವಿಧಾನಸಭಾ ಸ್ಪೀಕರ್ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.
ಡಿ.ಕೆ.ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿ ಯು.ಟಿ.ಖಾದರ್ ಅವರಿಗೆ ಸಚಿವ ಸ್ಥಾನ ಸಿಕ್ಕಿದೆ. ಈ ಬಗ್ಗೆ ಡಿ.ಕೆ.ಶಿವಕುಮಾರ್ ಸ್ವತಃ ಖಾದರ್ ಅವರಿಗೆ ಕರೆ ಮಾಡಿ ಸಂಜೆ ಪ್ರಮಾಣವಚನ ಸ್ವೀಕಾರಕ್ಕೆ ಲೋಕಭವನಕ್ಕೆ ಬರುವಂತೆ ಆಹ್ವಾನಿಸಿದ್ದಾರೆ ಎಂದು ತಿಳಿದುಬಂದಿದೆ.

