ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವಿವಾದಿತ ಪೋಸ್ಟ್ ಮಾಡಿದ್ದ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಒಂದು ಸಮುದಾಯದ ವಿರುದ್ಧ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದ ಆರೋಪದಲ್ಲಿ ಸುರೇಶ್ ಎಂಬಾತನನ್ನು ಪೊಲೀಸರು ಬಂಧಿಸಿದ್ದರು.
ಆರೋಪಿಯನ್ನು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡುವಂತೆ ಪೊಲಿಸರು ಕೋರ್ಟ್ ಗೆ ಮನವಿ ಮಾಡಿದ್ದರು. ಆದರೆ ಒಂದು ದಿನದ ಮಟ್ಟಿಗೆ ಆರೋಪಿಯನ್ನು ಪೊಲೀಸ್ ಕಸ್ಟಡಿಗೆ ನೀಡಿ ಮೈಸೂರು ನ್ಯಾಯಾಲಯ ಆದೇಶ ಹೊರಡಿಸಿದೆ.