HomeKarnatakaಉದಯಗಿರಿ ಗಲಭೆ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ -CM ಸಿದ್ದರಾಮಯ್ಯ

ಉದಯಗಿರಿ ಗಲಭೆ ಕೇಸ್ : ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ -CM ಸಿದ್ದರಾಮಯ್ಯ

ಬೆಂಗಳೂರು : ಉದಯಗಿರಿ ಗಲಭೆ ಕೇಸ್ ಗೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಜೊತೆ ಚರ್ಚಿಸಿದೆ. ತಪ್ಪಿತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು. ಕಾನೂನು ಕೈಗೆತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ತಕ್ಕ ಶಿಕ್ಷೆಯಾಗುವಂತೆ ಕ್ರಮ ವಹಿಸಬೇಕು. ಪೊಲೀಸ್ ಠಾಣೆ ಮೇಲೆ ಕಲ್ಲು ತೂರಿದವರು, ಅದಕ್ಕೆ ಪ್ರಚೋದನೆ ನೀಡಿದ ಎಲ್ಲರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು, ಇದರ ಜೊತೆಗೆ ತಪ್ಪು ಮಾಡದವರಿಗೆ ಕೂಡ ತೊಂದರೆ ಆಗಬಾರದು.

ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಪ್ರಯತ್ನ ಮಾಡಿದ ಎಲ್ಲರನ್ನೂ ಕಾನೂನು ಕ್ರಮಕ್ಕೆ ಒಳಪಡಿಸಬೇಕು ಎಂಬ ಕಟ್ಟುನಿಟ್ಟಿನ ಸೂಚನೆಯನ್ನು ನೀಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular