ಮೈಸೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಪೊಲೀಸರು ಬಧಿಸಿದ್ದಾರೆ.
ಉದಯಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಲಾಟೆಗೆ ಪ್ರಚೋದನೆ ನೀಡಿದ್ದ ಆರೋಪದಲ್ಲಿ ಮೌಲ್ವಿ ಮುಫ್ತಿ ಮುಸ್ತಾಕ್ ನನ್ನು ಬಂಧಿಸಲಾಗಿದೆ.
ಸಿಸಿಬಿ ಪೊಲೀಸರು ಮೌಲ್ವಿ ಮುಸ್ತಾಕ್ ನನ್ನು ಬಂಧಿಸಿದ್ದಾರೆ. ಗಲಾಟೆ ಪ್ರಕರಣ ನಡೆದು 17 ದಿನಗಳ ಬಳಿಕ ಆರೋಪಿ ಅರೆಸ್ಟ್ ಆಗಿದ್ದಾನೆ.