ಖ್ಯಾತ ಗಾಯಕ ಉದಿತ್ ನಾರಾಯಣ್ ವಸತಿ ಕಟ್ಟಡಕ್ಕೆ ಬೆಂಕಿ

ಮುಂಬೈನಲ್ಲಿ ರಾಷ್ಟ್ರೀಯ ಪ್ರಶಸ್ತಿ ವಿಜೇತ ಗಾಯಕ ಉದಿತ್ ನಾರಾಯಣ್ ಅವರ ವಸತಿ ಕಟ್ಟಡದಲ್ಲಿ ಭೀಕರ ಬೆಂಕಿ ಕಾಣಿಸಿಕೊಂಡಿದೆ.

ವಿದ್ಯುತ್ ಉಪಕರಣಗಳಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಗಾಯಕ ಉದಿತ್ ನಾರಾಯಣ್ ಅವರ ಸ್ಕೈಪಾನ್ ಕಟ್ಟಡದಲ್ಲಿ ಸೋಮವಾರ ರಾತ್ರಿ 9 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಈ ಕಟ್ಟಡವು ಮುಂಬೈನ ಅಂಧೇರಿಯ ಶಾಸ್ತ್ರಿ ನಗರದಲ್ಲಿದೆ. ಕಟ್ಟಡದಲ್ಲಿದ್ದ ಅಪಾರ್ಟ್‌ಮೆಂಟ್‌ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಅಗ್ನಿಶಾಮಕ ದಳಕ್ಕೆ ಬೆಂಕಿ ನಂದಿಸಲು ಸಾಕಷ್ಟು ಸಮಯ ಹಿಡಿದಿದೆ.

ಉದಿತ್ ನಾರಾಯಣ್ ಅವರ ಕಟ್ಟಡದ 11 ನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಗಾಯಕ ಅದೇ ಕಟ್ಟಡದ 9 ನೇ ಮಹಡಿಯಲ್ಲಿ ವಾಸಿಸುತ್ತಿದ್ದಾರೆ. ಮನೆಗೆ ಬೆಂಕಿ ತಗುಲಲು ಕಾರಣಗಳನ್ನು ಇನ್ನೂ ತನಿಖೆ ನಡೆಸಲಾಗುತ್ತಿದೆ. ಕೆಲವು ವಿದ್ಯುತ್ ಉಪಕರಣಗಳಿಗೆ ಹಾನಿಯಾದ ಕಾರಣ ಬೆಂಕಿ ಕಾಣಿಸಿಕೊಂಡಿದೆ ಎಂದು ಹೇಳಲಾಗಿದೆ.

ಗಾಯಕ ಉದಿತ್ ನಾರಾಯಣ್ ಸೇಫ್ ಆಗಿದ್ದಾರೆ ಎಂದು ಹೇಳಲಾಗುತ್ತಿದ್ದು, ಈ ಘಟನೆಯಿಂದ ಶಾಕ್ ಆಗಿದ್ದಾರೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read