HomeKarnatakaಚಲಿಸುತ್ತಿದ ಪ್ರವಾಸಿಗರ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: ರಸ್ತೆ ಮಧ್ಯೆಯೆ ಹೊತ್ತಿ ಉರಿದ ಬಸ್:...

ಚಲಿಸುತ್ತಿದ ಪ್ರವಾಸಿಗರ ಬಸ್ ನಲ್ಲಿ ಭೀಕರ ಬೆಂಕಿ ಅವಘಡ: ರಸ್ತೆ ಮಧ್ಯೆಯೆ ಹೊತ್ತಿ ಉರಿದ ಬಸ್: 7 ಜನರು ಬಚಾವ್

ಉಡುಪಿ: ಚಲಿಸುತ್ತಿದ್ದ ಪ್ರವಾಸಿಗರ ಬಸ್‌ ನಲ್ಲಿ ಬೆಣ್ಕಿ ಅವಘಡ ಸಂಭವಿಸಿದ್ದು, ಇಡೀ ಬಸ್ ಹೊತ್ತಿ ಉರಿದ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರ ಸಮೀಪ ನಡೆದಿದೆ.

ಅದೃಷ್ಟವಶಾತ್ ಬಸ್‌ನಲ್ಲಿದ್ದ ಏಳು ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಡುಪಿಯಿಂದ ಸಾಗರದತ್ತ ತೆರಳುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬಸ್‌ನ ಎಲೆಕ್ಟ್ರಿಕಲ್ ಬಾಕ್ಸ್ (EDC Box) ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ಬಸ್ ತುಂಬೆಲ್ಲಾ ವ್ಯಾಪಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಬಸ್ ನಿರ್ವಾಹಕರು ತಕ್ಷಣ ಸಮಯಪ್ರಜ್ಞೆ ಮೆರೆದು ಬಸ್ ನಿಲ್ಲಿಸಿ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾನೆ. ನಿರ್ವಾಹಕನ ತ್ವರಿತ ಕ್ರಮದಿಂದ ಸಂಭವಿಸಬಹುದಾಗಿದ್ದ ದೊಡ್ಡ ದುರಂತ ತಪ್ಪಿದೆ.

ವಿಷಯ ತಿಳಿಯುತ್ತಿದ್ದಂತೆಯೇ ಉಡುಪಿ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ. ಬಳಿಕ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular