HomeLatest NewsBREAKING: ಉಡುಪಿಯಲ್ಲಿ ಭೀಕರ ಅಪಘಾತ: ಟೆಂಪೊ ಪಲ್ಟಿಯಾಗಿ ಐವರು ಕಾರ್ಮಿಕರು ದುರ್ಮರಣ

BREAKING: ಉಡುಪಿಯಲ್ಲಿ ಭೀಕರ ಅಪಘಾತ: ಟೆಂಪೊ ಪಲ್ಟಿಯಾಗಿ ಐವರು ಕಾರ್ಮಿಕರು ದುರ್ಮರಣ

ಉಡುಪಿ: ರಾಷ್ಟ್ರೀಯ ಹೆದ್ದಾರಿಯಾಲ್ಲಿ ಟೆಂಪೊ ಪಲ್ಟಿಯಾಗಿ ಬಿದ್ದ ಪರಿಣಾಮ ಐವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಕೋತಲಕಟ್ಟೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟೆಂಪೊ ಪಲ್ಟಿಯಾಗಿ ಬಿದ್ದಿದ್ದು, ಸ್ಥಳದಲ್ಲೇ ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. 7 ಕಾರ್ಮಿಕರು ಗಾಯಗೊಂಡಿದ್ದಾರೆ. ಕಾರ್ಯಕ್ರಮವೊಂದಕ್ಕೆ ಟೆಂಪೋದಲ್ಲಿ ಸಾಮಗ್ರಿ ಸಾಗಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.

ಟೆಂಪೊದಲ್ಲಿ 12 ಕಾರ್ಮಿಕರು ಇದ್ದರು. ಅವರಲ್ಲಿ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular