HomeLive NewsBIG NEWS: ಪಿಕಪ್ ವಾಹನ-ಆಟೋ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

BIG NEWS: ಪಿಕಪ್ ವಾಹನ-ಆಟೋ ಭೀಕರ ಅಪಘಾತ: ಓರ್ವ ಸ್ಥಳದಲ್ಲೇ ಸಾವು

ಉಡುಪಿ: ಪಿಕಪ್ ವಾಹನ ಹಾಗೂ ಆಟೋ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕೆಳಪೇಟೆಯಲ್ಲಿ ನಡೆದಿದೆ.

ಹಡವಿನಕೋಣೆ ನ್ಯೂ ಕಾಲೋನಿ ನಿವಾಸಿ ಕರಾ ಇಲಿಯಾಸ್ (49) ಮೃತ ದುರ್ದೈವಿ. ಮಲ್ಪೆಯಿಂದ ಶಿರೂರು ಮಾರ್ಕೆಟ್ ಕಡೆ ತೆರಳುತ್ತಿದ್ದ ಪಿಕಪ್ ವಾಹನ ಹಾಗೂ ಆಟೋ ನಡುವೆ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular