HomeKarnatakaBIG NEWS: ಪೊಲೀಸ್ ವಶದಲ್ಲಿದ್ದ ಆರೋಪಿ ಲಾಕಪ್ ನಲ್ಲೇ ಸಾವು

BIG NEWS: ಪೊಲೀಸ್ ವಶದಲ್ಲಿದ್ದ ಆರೋಪಿ ಲಾಕಪ್ ನಲ್ಲೇ ಸಾವು

ಉಡುಪಿ: ಪೊಲೀಸ್ ವಶದಲ್ಲಿದ್ದ ಆರೋಪಿಯೊಬ್ಬ ಲಾಕಪ್ ನಲ್ಲೇ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ನಡೆದಿದೆ.

45 ವರ್ಷದ ಬಿಜು ಮೋಹನ್ ಮೃತ ಆರೋಪಿ. ಮಹಿಳೆಗೆ ಕಿರುಕುಳ ನೀಡಿದ ಆರೋಪದಲ್ಲಿ ಬಿಜು ಮೋಹನ್ ನನ್ನು ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಪೊಲೀಸ್ ಲಾಕಪ್ ನಲ್ಲಿದ್ದ ಬಿಜು ಮೋಹನ್ ಇಂದು ನಸುಕಿನ ಜಾವ 3:45ರ ಸುಮಾರಿಗೆ ಸಾವನ್ನಪ್ಪಿದ್ದಾನೆ.

ಲಾಕಪ್ ನಲ್ಲಿದ್ದ ಬಿಜು ಮೋಹನ್ ಗೋಡೆಗೆ ತಲೆ ಬಡಿದುಕೊಂಡಿರುವುದು ಗೊತ್ತಾಗಿದೆ. ತಕ್ಷಣ ಆತನನ್ನು ಪೊಲೀಸರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅಷ್ಟರಲ್ಲೇ ಆತ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಬಿಜು ಮೋಹನ್ ಕೇರಳದ ಕೊಲ್ಲಂ ಜಿಲ್ಲೆಯವನಾಗಿದ್ದು, ಪೊಲೀಸರು ಆತನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular