HomeKarnatakaBREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

BREAKING NEWS: ಅಂಬಲಪಾಡಿಯಲ್ಲಿ ಅಗ್ನಿ ದುರಂತ ಪ್ರಕರಣ: ಪತಿ ಬೆನ್ನಲ್ಲೇ ಪತ್ನಿಯೂ ದಾರುಣ ಸಾವು

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿಯ ಮನೆಯಲ್ಲಿ ಸಂಭವಿಸಿದ್ದ ಭೀಕರ ಅಗ್ನಿ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಪತಿ ಸಾವಿನ ಬಳಿಕ ಇದೀಗ ಪತ್ನಿ ಕೂಡ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮನೆಯಲ್ಲಿಯೇ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ ಶೆಟ್ಟಿ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ರಮಾನಂದ್ ಅವರ ಪತ್ನಿ ಅಶ್ವಿನಿ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅಶ್ವಿನಿ ಕೂಡ ಸಾವನ್ನಪ್ಪಿದ್ದಾರೆ.

ಬೆಂಕಿ ದುರಂತದಲ್ಲಿ ಮೆದುಳು ಹಾಗೂ ಶ್ವಾಸಕೋಶ ಬ್ಲಾಕ್ ಆಗಿತ್ತು. ಇದರಿಂದ ಚಿಕಿತ್ಸೆ ಫಲಿಸದೇ ಇಂದು ಮಧ್ಯಾಹ್ನ ಅಶ್ವಿನಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬ್ಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯಲ್ಲಿದ್ದ ಸೆಂಟ್ರಲ್ ಎಸಿ ಶಾರ್ಟ್ ಸರ್ಕ್ಯೂಟ್ ನಿಂದ ಸ್ಫೋಟ ಸಂಭವಿಸಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಇದೀಗ ದಂಪತಿ ಮೃತಪಟ್ಟಿದ್ದು, ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular