HomeUncategorizedಬಾಳೆಹಣ್ಣು ಕೂಡ ವಿಷಕಾರಿ: ರಾಸಾಯನಿಕ ಬಳಸಿ ಬಾಳೆಕಾಯಿ ಹಣ್ಣಾಗಿಸುವ ಜಾಲ ಪತ್ತೆ: 8.71 ಲಕ್ಷ ಮೌಲ್ಯದ...

ಬಾಳೆಹಣ್ಣು ಕೂಡ ವಿಷಕಾರಿ: ರಾಸಾಯನಿಕ ಬಳಸಿ ಬಾಳೆಕಾಯಿ ಹಣ್ಣಾಗಿಸುವ ಜಾಲ ಪತ್ತೆ: 8.71 ಲಕ್ಷ ಮೌಲ್ಯದ ಹಣ್ಣು ನಾಶಪಡಿಸಿದ ಅಧಿಕಾರಿಗಳು

ಉಡುಪಿ: ಸೇವಿಸುವ ಆಹಾರ, ತರಕಾರಿ, ಹಣ್ಣು ಎಲ್ಲವೂ ವಿಷಮಯವಾಗುತ್ತಿದೆ. ಅತಿಯಾದ ರಾಸಾಯನಿಕ ಬಳಕೆಯಿಂದಾಗಿ ಹಣ್ಣು-ತರಕಾರಿ ತಿನ್ನಲು ಯೋಚಿಸಬೇಕಾದ ಸ್ಥಿತಿ ಎದುರಾಗಿದೆ. ಇದೀಗ ಬಾಳೆಕಾಯಿ ಹಣ್ಣು ಮಾಡಲು ಹಾನಿಕಾರಕ ರಾಸಾಯನಿಕ ಬಳದ್ಸುವ ಜಾಲವೊಂದು ಪತ್ತೆಯಾಗಿದೆ.

ಬಾಳೆಕಾಯಿಗಳನ್ನು ತ್ವರಿತವಾಗಿ ಹಣ್ಣಾಗಿಸಲು ಹಾನಿಕಾರಕ ರಾಸಾಯನಿಕ ಹಾಗೂ ಕೃತಕ ಬಣ್ಣ ಬಳಸುತ್ತಿದ್ದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ಅಲೆವೂರು ಗ್ರಾಮದ ಹಲವು ಪ್ರದೇಶಗಳಲ್ಲಿ ಆಹಾರ ಸುರಕ್ಷತಾ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ. ಅಲೆವೂರು ಗ್ರಾಮದ ಕೆಮ್ತೂರು ಹಾಗೂ ಮಣಿಪಾಲ ಸಮೀಪದ ದುಗ್ಲಿ ಪರಿಸರದಲ್ಲಿರುವ ಬಾಳೆಹಣ್ಣು ವ್ಯಾಪಾರಿಗಳ ಮೂರು ಗೋದಾಮುಗಳನ್ನು ಅಧಿಕಾರಿಗಳ ತಂಡ ಪರಿಶೀಲಿಸಿದೆ.

ಅಸಿಸ್ಟೆಂಟ್ ಕಮಿಷನರ್ ರಶ್ಮಿ ಎಸ್.ಆರ್. ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸಾರ್ವಜನಿಕರಿಂದ ಬಂದ ಮಾಹಿತಿ ಹಾಗೂ ದೂರುಗಳ ಆಧಾರದ ಮೇಲೆ ಈ ತಪಾಸಣೆ ನಡೆಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಳೆ ಕಾಯಿಗಳನ್ನು ಕೃತಕವಾಗಿ ಹಣ್ಣಾಗಿಸಲು ಬಳಸುತ್ತಿದ್ದ ಹಾನಿಕಾರಕ ರಾಸಾಯನಿಕಗಳು ದಾಳಿಯ ವೇಳೆ ಪತ್ತೆಯಾಗಿವೆ. ಇಂಡೋಥ್ರೆಲ್ ಸೇರಿದಂತೆ ರಾಸಾಯನಿಕ ಪದಾರ್ಥಗಳು ಹಾಗೂ ಹಣ್ಣುಗಳಿಗೆ ಕೃತಕ ಬಣ್ಣ ನೀಡಲು ಬಳಸುತ್ತಿದ್ದ ವಸ್ತುಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ರಾಸಾಯನಿಕಗಳನ್ನು ಬಳಕೆ ಮಾಡಲು ಬಳಸುತ್ತಿದ್ದ ಪರಿಕರಗಳನ್ನೂ ಪತ್ತೆಹಚ್ಚಲಾಗಿದೆ.

ಒಟ್ಟು 10,890 ಕೆಜಿ ಬಾಳೆಹಣ್ಣುಗಳು ರಾಸಾಯನಿಕ ಬಳಕೆಗೆ ಒಳಗಾಗಿರುವುದು ಪತ್ತೆಯಾಗಿದ್ದು, ಇವುಗಳ ಅಂದಾಜು ಮೌಲ್ಯ 8.71 ಲಕ್ಷ ರೂ. ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ವಶಪಡಿಸಿಕೊಂಡ ಹಣ್ಣುಗಳನ್ನು ನಗರಸಭೆಯ ತ್ಯಾಜ್ಯ ವಿಲೇವಾರಿ ಪ್ರದೇಶದಲ್ಲಿ ನಾಶಪಡಿಸಲಾಗಿದೆ.

ರಾಸಾಯನಿಕ ಬಳಕೆಗೆ ಸಂಬಂಧಿಸಿದ ವಸ್ತುಗಳು ಹಾಗೂ ಕೃತ್ಯಕ್ಕೆ ಬಳಸಲಾಗುತ್ತಿದ್ದ ವಾಹನಗಳನ್ನೂ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂದಿನ ಕಾನೂನು ಕ್ರಮ ಕೈಗೊಳ್ಳುವ ಪ್ರಕ್ರಿಯೆ ಮುಂದುವರಿದಿದೆ.

ರಾಜ್ಯದ ರೈಲ್ವೆ ನಿಲ್ದಾಣಗಳಲ್ಲಿನ ಆಹಾರ ಮಳಿಗೆಗಳ ವಿರುದ್ಧ ಆಗಸ್ಟ್ 20ರಂದು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ನಡೆಸಿದ ಮೆಗಾ ತಪಾಸಣೆಯಲ್ಲೂ ಹಲವು ಅಕ್ರಮಗಳು ಬೆಳಕಿಗೆ ಬಂದಿದ್ದವು. ಬೆಂಗಳೂರಿನ ಕೆ.ಆರ್. ಪುರಂ ರೈಲು ನಿಲ್ದಾಣದ ಕ್ಯಾಂಟೀನ್‌ಗಳಲ್ಲಿ ಅನೈರ್ಮಲ್ಯ ಕಂಡುಬಂದಿದ್ದರೆ, ಮೈಸೂರು ನಿಲ್ದಾಣದಲ್ಲಿ ಪ್ಲಾಸ್ಟಿಕ್ ಬಳಸಿ ಇಡ್ಲಿ ತಯಾರಿಸುತ್ತಿರುವುದು ಹಾಗೂ ಪತ್ರಿಕೆಗಳ ಮೇಲೆ ಕರಿದ ತಿಂಡಿಗಳನ್ನು ಇಟ್ಟು ಮಾರಾಟ ಮಾಡುತ್ತಿರುವುದು ಪತ್ತೆಯಾಗಿತ್ತು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular