HomeLatest NewsBIG NEWS: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಮಹಿಳೆ ಅರೆಸ್ಟ್

BIG NEWS: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಹಾಕುತ್ತಿದ್ದ ಮಹಿಳೆ ಅರೆಸ್ಟ್

ಉಡುಪಿ: ಶಿಕ್ಷಣ ಸಂಸ್ಥೆಗಳು, ಆಸ್ಪತ್ರೆಗಳು ಸೇರಿದಂತೆ ದೇಶದ ವಿವಿಧೆಡೆ ಬಾಅಂಬ್ ಬೆದರಿಕೆ ಹಾಕುತ್ತಿದ್ದ ಖತರ್ನಾಕ್ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಹಾಕುತ್ತಿದ್ದ ಚೆನ್ನೈ ಮೂಲದ ರೀನಾ ಜೋಶಿಲ್ಡ್ ಬಂಧಿತ ಆರೋಪಿ. ಗುಜರಾತ್ ನ ಅಹಮದಾಬಾದ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚೆನ್ನೈನಲ್ಲಿ ಇಂಜಿನಿಯರ್ ಆಗಿದ್ದ ರೀನಾ ಜೋಶಿಲ್ಡ್ ಹುಸಿ ಬಾಂಬ್ ಬೆದರಿಕೆ ಸಂದೇಶ ರವಾನಿಸುತ್ತಿದ್ದಳು. ಆರೋಪಿ ರೀನಾ ಉಡುಪಿ ನಗರದ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯೊಡ್ದಿದ್ದಳು. ಹೀಗಾಅಗಿ ತನಿಖೆಗಾಗಿ ಆರೋಪಿಯನ್ನು ಅಹಮದಾಬಾದ್ ಪೊಲೀಸರಿಂದ ಉಡುಪಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ರೀನಾ ಜೂನ್ 16ರಂದು ಉಡುಪಿಯ ವಿದ್ಯೋದಯ ಪಬ್ಲಿಕ್ ಸ್ಕೂಲ್ ಗೆ ಬಾಂಬ್ ಬೆದರಿಕೆ ಹಾಕಿದ್ದರು.

For Latest News Updates, Join Our Whatsapp Community🚩
RELATED ARTICLES

Most Popular