HomeKarnatakaBIG NEWS: ಉಡುಪಿ ಕಾಲೇಜು ವಿಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ

BIG NEWS: ಉಡುಪಿ ಕಾಲೇಜು ವಿಡಿಯೋ ಪ್ರಕರಣ; ತನಿಖಾಧಿಕಾರಿ ಬದಲಾವಣೆ

ಉಡುಪಿ: ಉಡುಪಿ ಖಾಸಗಿ ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿಯನ್ನು ಬದಲಾವಣೆ ಮಾಡಲಾಗಿದೆ.

ಪ್ರಕರಣದ ತನಿಖಾಧಿಕಾರಿಯಾಗಿದ್ದ ಮಲ್ಫೆ ಇನ್ಸ್ ಪೆಕ್ಟರ್ ಮಂಜುನಾಥ್ ಗೌಡ ಅವರನ್ನು ಬದಲಾವಣೆ ಮಾಡಲಾಗಿದ್ದು, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಕ ಮಾಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಲೇಜಿನ ಶೌಚಾಲಯದಲ್ಲಿ ವಿಡಿಯೋ ಚಿತ್ರೀಕರಣ ಪ್ರಕರಣ ರಾಷ್ಟ್ರ ಮಟ್ಟದಲ್ಲಿ ಸುದ್ದಿಯಾಗಿದ್ದು, ಬಿಜೆಪಿ ಪ್ರತಿಭಟನೆ ತೀವ್ರಗೊಳಿಸಿದೆ. ಅಲ್ಲದೇ ತನಿಖಾಧಿಕಾರಿಯನ್ನು ಬದಲಾವಣೆ ಮಾಡುವಂತೆ ಒತ್ತಾಯಗಳು ಕೇಳಿಬಂದಿದ್ದವು. ಈ ಹಿನ್ನೆಲೆಯಲ್ಲಿ ಉಡುಪಿ ಎಸ್.ಪಿ ಅಕ್ಷಯ್, ತನಿಖಾಧಿಕಾರಿ ಬದಲಾಯಿಸಿ, ಕುಂದಾಪುರ ಡಿವೈಎಸ್ ಪಿ ಬೆಳ್ಳಿಯಪ್ಪ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular