HomeLatest Newsಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕಾಗಿ ಸಂದೇಶ

ಉಡುಪಿ ಡಿಸಿ ಹೆಸರಿನಲ್ಲಿ ನಕಲಿ ಖಾತೆ, ಹಣಕ್ಕಾಗಿ ಸಂದೇಶ

ಉಡುಪಿ ಜಿಲ್ಲಾಧಿಕಾರಿಗಳಾದ ಸ್ವರೂಪ ಟಿ. ಕೆ. ಅವರಿಗೆ ಸೈಬರ್ ಕಳ್ಳರ ಕಾಟ. ಹೌದು ಜಿಲ್ಲಾಧಿಕಾರಿಗಳ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರದು ಹಣಕ್ಕಾಗಿ ಸಂದೇಶಗಳನ್ನು ಕಳಿಸಲಾಗುತ್ತಿದೆ. ಈ ಕುರಿತು ಪೊಲೀಸರಿಗೆ ದೂರು ನೀಡಲಾಗಿದೆ.

ಈ ಬಗ್ಗೆ ಉಡುಪಿ ಜಿಲ್ಲಾಧಿಕಾರಿಗಳು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಸಾಮಾಜಿಕ ಜಾಲತಾಣಗಳಾದ ಫೇಸ್‌ಬುಕ್‌ ಹಾಗೂ ವಾಟ್ಸಪ್‌ಗಳಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ದುರ್ಬಳಕೆ ಮಾಡಿಕೊಂಡು ನಕಲಿ ಖಾತೆಗಳನ್ನು ಸೃಜಿಸಿ, ಬೇರೆ ಬೇರೆ ಕಾರಣಗಳನ್ನು ನೀಡಿ ಹಣ  ವರ್ಗಾಯಿಸುವಂತೆ ಸಂದೇಶಗಳನ್ನು ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿರುತ್ತದೆ ಎಂದು ಹೇಳಿದ್ದಾರೆ.

ಈ ಬಗ್ಗೆ ಈಗಾಗಲೇ ಕಾನೂನು ಕ್ರಮಕೈಗೊಳ್ಳುವಂತೆ ಸೆನ್‌ ಪೊಲೀಸ್‌ ಠಾಣೆ ಉಡುಪಿಯಲ್ಲಿ ದೂರನ್ನು ದಾಖಲಿಸಲಾಗಿರುತ್ತದೆ. ಫೇಸ್‌ಬುಕ್‌ ಹಾಗೂ ವಾಟ್ಸಪ್‌ಗಳಲ್ಲಿ ನನ್ನ ಫೋಟೋ ಹಾಗೂ ಹೆಸರನ್ನು ಬಳಸಿ  ಹಣ ವರ್ಗಾವಣೆಗೆ ಅಥವಾ ಇನ್ನಿತರೆ ಬೇಡಿಕೆಗಳ ಸಂದೇಶಗಳು ಸ್ವೀಕೃತವಾದಲ್ಲಿ, ಅಂತಹ ಸಂದೇಶಗಳಿಗೆ ಸ್ಪಂದಿಸದೆ, ಸಂದೇಶ ಸ್ವೀಕೃತವಾದ ತಕ್ಷಣ ಸೆನ್‌ ಪೊಲೀಸ್‌ ಠಾಣೆಗೆ ದೂರು ನೀಡುವಂತೆ ಎಲ್ಲಾ ಅಧಿಕಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ಮೂಲಕ ತಿಳಿಸಲಾಗಿದೆ ಎಂದು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉಡುಪಿ ಜಿಲ್ಲಾಧಿಕಾರಿಗಳಾಗಿ ಸ್ವರೂಪ ಟಿ. ಕೆ. 2025ರ ಜೂನ್‌ನಲ್ಲಿ ಅಧಿಕಾರ ವಹಿಸಿಕೊಂಡಿದ್ದಾರೆ. ಅದಕ್ಕೂ ಮೊದಲು ಡಾ. ಕೆ. ವಿದ್ಯಾಕುಮಾರಿ ಉಡುಪಿಯ ಡಿಸಿ ಆಗಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular