HomeKarnatakaBREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

BREAKING NEWS: ಅಂಬಲಪಾಡಿ ಮನೆಯಲ್ಲಿ ಅಗ್ನಿ ದುರಂತ: ಬಾರ್ ಮಾಲೀಕ ದುರ್ಮರಣ

ಉಡುಪಿ: ಉಡುಪಿ ಜಿಲ್ಲೆಯ ಅಂಬಲಪಾಡಿ ಮನೆಯೊಂದರಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ವ್ಯಕ್ತಿಯೋರ್ವರು ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.

ರಮಾನಂದ ಶೆಟ್ಟಿ ಮೃತ ದುರ್ದೈವಿ. ಉಡುಪಿಯ ಅಂಬಲಪಾಡಿಯ ಗಾಂಧಿನಗರದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿತ್ತು. ಘಟನೆಯಲ್ಲಿ ಶೆಟ್ಟಿ ಬಾರ್ & ರೆಸ್ಟೋರೆಂಟ್ ಮಾಲೀಕ ರಮಾನಂದ್ ಶೆಟ್ಟಿ ಹಾಗೂ ಪತ್ನಿ ಅಶ್ವಿನಿ ಗಂಭೀರವಾಗಿ ಗಾಯಗೊಂಡಿದ್ದರು. ಇಬ್ಬರನ್ನೂ ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಚಿಕಿತ್ಸೆ ಫಲಕಾರಿಯಾಗದೇ ಬಾರ್ ಮಾಲೀಕ ರಮಾನಂದ ಶೆಟ್ಟಿ ಸಾವನ್ನಪ್ಪಿದ್ದಾರೆ. ಅವರ ಪತ್ನಿ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಯಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಘಟನೆಯಲ್ಲಿ ಇಬ್ಬರು ಮಕ್ಕಳನ್ನು ರಕ್ಷಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular