HomeLatest NewsBIG NEWS: ಪ್ರವಾಹದಂತೆ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರರು: ಸ್ಥಳೀಯರಿಂದ ರಕ್ಷಣೆ!

BIG NEWS: ಪ್ರವಾಹದಂತೆ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿ ಹೋದ ಬೈಕ್ ಸವಾರರು: ಸ್ಥಳೀಯರಿಂದ ರಕ್ಷಣೆ!

ಉಡುಪಿ: ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುತ್ತಿದ್ದು, ವರುಣಾರ್ಭಟಕ್ಕೆ ಜನಜೀವನ ಸಂಪೂರ್ಣ ಅಸ್ತವ್ಯಸ್ಥಗೊಂಡಿದೆ. ನದಿ, ಹಳ್ಳ-ಕೊಳ್ಳಗಳು ಅಪಾಯದಮಟ್ಟದಲ್ಲಿ ಹರಿಯುತ್ತಿವೆ. ಇಂತಹ ಅಪಯಾದಲ್ಲಿಯೂ ಬೈಕ್ ಸವಾರರಿಬ್ಬರೂ ಹುಚ್ಚಾಟವಾಡಲು ಹೋಗಿ ನೀರಿನ ರಭಸಕ್ಕೆ ಕೊಚ್ಚಿ ಹೋಗಿದ್ದಾರೆ.

ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿದ್ದು, ಸೇತುವೆಗಳು ನೀರಿನಲ್ಲಿ ಮುಳುಗಡೆಯಾಗಿವೆ. ಪ್ರವಾಹದಂತೆ ಸೇತುವೆ ಮೇಲೆ ನೀರು ಹರಿಯುತ್ತಿದ್ದರೂ ಇಬ್ಬರು ಬೈಕ್ ಸವಾರರು ಸೇತುವೆ ದಾಟಲು ಹೋಗಿ ಅಪಾಯಕ್ಕೆ ಸಿಲುಕಿಕೊಂಡಿದ್ದಾರೆ. ಬೋರ್ಗರದು ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಬೈಕ್ ದಾಟಿಸಲು ಹೋಗಿ ಬೈಕ್ ಸಮೇತ ಸವಾರರಿಬ್ಬರೂ ನೀರಿನ ಸೆಳೆತಕ್ಕೆ ಕೊಚ್ಚಿ ಹೋಗಿದ್ದಾರೆ. ಇದನ್ನು ಕಂಡ ಸ್ಥಳೀಯರು ಬೈಕ್ ಸವಾರರಿಬ್ಬರನ್ನೂ ರಕ್ಷಿಸಿದ್ದಾರೆ.

ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದದ ಒಡಾಕೆರೆಯಲ್ಲಿ ಈ ಘಟನೆ ನಡೆದಿದೆ. ಸದ್ಯ ಸ್ಥಳಯರ ಸಮಯಪ್ರಜ್ಞೆಯಿಂದ ಇಬ್ಬರು ಯುವಕರು ಬಚಾವ್ ಆಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular