HomeKarnatakaಮಾಜಿ ಶಾಸಕ ಯು.ಆರ್. ಸಭಾಪತಿ ವಿಧಿವಶ

ಮಾಜಿ ಶಾಸಕ ಯು.ಆರ್. ಸಭಾಪತಿ ವಿಧಿವಶ

ಉಡುಪಿ: ಮಾಜಿ ಶಾಸಕ ಯು.ಆರ್. ಸಭಾಪತಿ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ ಯು.ಆರ್. ಸಭಾಪತಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ಉಡುಪಿಯ ತಮ್ಮ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಯು.ಆರ್. ಸಭಾಪತಿ ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಎರಡು ಬಾರಿ ಉಡುಪಿ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 1994ರಲ್ಲಿ ಕೆಸಿಪಿಯಿಂದ ಹಾಗೂ 1999ರಲ್ಲಿ ಕಾಂಗ್ರೆಸ್ ನಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಜಿ ಶಾಸಕರ ಅಗಲಿಕೆಗೆ ರಾಜಕೀಯ ನಾಯಕರು ಕಂಬನಿ ಮಿಡಿದಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular